ಕೊಪ್ಪಳ: ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಬ್ರಾಹ್ಮಣ ಸಮಾಜದ ವಿದ್ಯಾರ್ಥಿಗಳಿಗೆ ಇಲ್ಲಿನ ರಾಯರ ಮಠದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿ ಗೌರವಿಸಲಾಯಿತು.

1008 ಸುಬುಧೇಂದ್ರ ತೀರ್ಥಸೇವಾ ಟ್ರಸ್ಟ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶೇ 90ಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಲಾಯಿತು. ಎಸ್ಎಸ್ಎಲ್ಸಿ 13, ಪಿಯುಸಿಯ 10 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕೊಡಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಮಾಜದ ಮುಖಂಡ ರಾಘವೇಂದ್ರ ಕುಲಕರ್ಣಿ ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ಎನ್ನುವಂತೆ ವಿದ್ಯಾರ್ಥಿಗಳು ಹಂತದಲ್ಲಿ ಪ್ರೌಢಶಾಲಾ ಹಂತದಿಂದಲೇ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಇದೇ ರೀತಿ ಕಠಿಣ ಪರಿಶ್ರಮ, ಬದ್ಧತೆ ಮತ್ತು ನಿರಂತರ ಪ್ರಯತ್ನದಿಂದ ಶ್ರಮಪಟ್ಟರೆ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಬಹುದು ಎಂದು ಹೇಳಿದರು.

ಸಮಿತಿ ಅಧ್ಯಕ್ಷ ಸುಶಿಲೇಂದ್ರರಾವ ದೇಶಪಾಂಡೆ, ಗೌರವಾಧ್ಯಕ್ಷ ಮೈಲಾರರಾವ್ ಕುಲಕರ್ಣಿ, ಕಾರ್ಯದರ್ಶಿ ಧೀರೇಂದ್ರ ದೇಸಾಯಿ, ಉಪಾಧ್ಯಕ್ಷ ಮುರಳಿಧರರಾವ್ ದೇಸಾಯಿ, ಮಹಾಸಭಾದ ಜಿಲ್ಲಾ ಚುನಾಯಿತ ಪ್ರತಿನಿಧಿ ಗುರುರಾಜ ಎನ್.ಜೋಶಿ, ಪ್ರಮುಖರಾದ ನಾರಾಯಣಾಚಾರ ಪುರೋಹಿತ, ಭೋಗೇಶರಾವ ಪಟವಾರಿ, ವಿಜಯಕುಮಾರ್ ಕಿನ್ನಾಳ, ಪ್ರದೀಪ್ ದೇಸಾಯಿ, ರಮೇಶ್ ದೇಸಾಯಿ, ಗುಂಡಾಚಾರ ಗಲಗಲಿ, ಅನಿಲಕುಮಾರ ಕುಲಕರ್ಣಿ, ಗುರುರಾಜ ಕುಲಕರ್ಣಿ, ವೆಂಕಟೇಶ ಕುಲಕರ್ಣಿ, ಮೋಹನರಾವ ಕುಲಕರ್ಣಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-35-749365810

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.