ಯಲಬುರ್ಗಾ: ‘ಜಿಲ್ಲೆಯ ಗ್ರಾಮೀಣ ಪ್ರದೇಶದ ಪ್ರತಿಭಾವಂತ ಯುವಕ, ಯುವತಿಯರಿಗೆ ಉನ್ನತ ಶಿಕ್ಷಣ ಪಡೆಯುವಲ್ಲಿ ಕೊಪ್ಪಳ ವಿಶ್ವವಿದ್ಯಾಲಯ ಅತ್ಯುತ್ತಮ ವೇದಿಕೆಯಾಗಿ ರೂಪುಗೊಳ್ಳುತ್ತಿದೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿ.ಡಾಣಿ ಹೇಳಿದರು.

ಪಟ್ಟಣದ ಹೊರವಲಯದಲ್ಲಿರುವ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಿದ್ದ 3ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಹಂತ ಹಂತವಾಗಿ ಅಭಿವೃದ್ಧಿ ಗೊಳ್ಳುತ್ತಿರುವ ವಿಶ್ವವಿದ್ಯಾಲಯದಿಂದ ಈಗಾಗಲೇ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ. ಈ ಭಾಗದ ಯುವಕ ಯುವತಿಯರ ಉನ್ನತ ಶಿಕ್ಷಣದ ಕನಸು ನನಸು ಮಾಡುವಲ್ಲಿ ವಿವಿ ಬದ್ಧತೆ ತೋರುತ್ತಿದೆ’ ಎಂದರು.

‘ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ಮುಂದೆ ಬರಬೇಕು. ವಿವಿ ವ್ಯಾಪ್ತಿಯ ಎಲ್ಲಾ ಕೇಂದ್ರಗಳಲ್ಲಿ ಉತ್ತಮ ಕಲಿಕಾ ವಾತಾವರಣ ನಿರ್ಮಾಣಕ್ಕೆ ಪ್ರಯತ್ನಿಸಲಾಗುತ್ತಿದೆ. ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದ್ದು ಯುವಕ ಮತ್ತು ಯುವತಿಯರು ಉನ್ನತ ಶಿಕ್ಷಣ ಪಡೆದು ಉನ್ನತ ಸ್ಥಾನಮಾನ ಪಡೆಯಲು ಮುಂದಾಗಬೇಕು’ ಎಂದರು.

ಕುಲಸಚಿವ ಪ್ರೊ. ಕೆ.ರಮೇಶ ಮಾತನಾಡಿ, ‘ವಿಶ್ವವಿದ್ಯಾಲಯದ ಅಭಿವೃದ್ಧಿಗೆ ತಂತ್ರಜ್ಞಾನದ ಬಳಕೆಯು ಮಹತ್ವ ಪಾತ್ರ ನಿರ್ವಹಿಸುತ್ತದೆ. ಅದಕ್ಕೆ ತಕ್ಕಂತೆ ಸಿದ್ಧತೆ ಮಾಡಿಕೊಳ್ಳುವುದು, ಬದಲಾಗುವುದು ಪ್ರಾಧ್ಯಾಪಕರಿಗೂ ಹಾಗೂ ವಿದ್ಯಾರ್ಥಿಗಳಿಗೆ ಅನಿವಾರ್ಯ. ಪ್ರಸ್ತುತ ಎಐ ಅಂತಹ ಹೊಸ ತಂತ್ರಜ್ಞಾನವು ಪ್ರತಿಯೊಬ್ಬರಿಗೂ ಅವಶ್ಯಕ ಎಂಬಂತಾಗಿದೆ’ ಎಂದರು.

ಚಲನಚಿತ್ರ ಅಕಾಡೆಮಿ ಸದಸ್ಯೆ ಸಾವಿತ್ರಿ ಮಜುಮಂದಾರ ಮಾತನಾಡಿ, ‘3ನೇ ವರ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿರುವ ಕೊಪ್ಪಳ ವಿಶ್ವವಿದ್ಯಾಲಯವು ಸಮಗ್ರವಾಗಿ ಅಭಿವೃದ್ಧಿಗೊಳ್ಳಬೇಕಾದರೆ ಜಿಲ್ಲೆಯ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಇಚ್ಛಾಶಕ್ತಿ ಅವಶ್ಯಕತೆಯಿದೆ. ಈಗಿನ ಕುಲಪತಿಗಳು ಶ್ರಮಿಕರಾಗಿದ್ದಾರೆ. ಅದಕ್ಕೆ ಪ್ರೋತ್ಸಾಹ, ಅನುದಾನ ಹಾಗೂ ಬೆಂಬಲ ದೊರೆಯಬೇಕಿದೆ’ ಎಂದರು.

ಪ್ರದರ್ಶನ ಕಲೆ ವಿಭಾಗದಿಂದ ಶ್ರೀಕೃಷ್ಣದೇವರಾಯ ನಾಟಕ ಪ್ರದರ್ಶನ ಮಾಡಲಾಯಿತು. ಪತ್ರಿಕೋದ್ಯಮ ವಿಭಾಗದ ಕಲ್ಯಾಣವಾಣಿ ವಿದ್ಯಾರ್ಥಿ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕೊಪ್ಪಳ ಅಧ್ಯಯನ ಕೇಂದ್ರದ ಆಡಳಿತಾಧಿಕಾರಿ ತಿಮ್ಮಾರಡ್ಡಿ, ಕರ್ನಾಟಕ ಜನಪದ ಅಕಾಡೆಮಿ ಸದಸ್ಯ ಜೀವನಸಾಬ ಬಿನ್ನಾಳ, ಹಣಕಾಸು ಅಧಿಕಾರಿ ಅಮೀನಸಾಬ ಅತ್ತಾರ ಮಾತನಾಡಿದರು.

ವಿವಿಧ ಕೇಂದ್ರಗಳ ನಿರ್ದೇಶಕರಾದ ಕೆ.ಎಚ್ ಛತ್ರದ, ಶಿವರಾಜ ಗುರಿಕಾರ, ಸುಷ್ಮಾ ಕುಲಕರ್ಣಿ, ಮಂಜುನಾಥ ಮಹಾಲಿಂಗಪುರ ಇದ್ದರು. ಪ್ರಾಧ್ಯಾಪಕಿ ಗೀತಾ ಪಾಟೀಲ ನಿರೂಪಿಸಿದರು. ಪ್ರಾಧ್ಯಾಪಕ ನಾಗಪ್ಪ ಹೂವಿನಬಾವಿ ಸ್ವಾಗತಿಸಿದರು. ಉಪನ್ಯಾಸಕ ದೇವಪ್ಪ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-35-1850715494

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.