ಕೊಪ್ಪಳ: ‘ಸ್ಪರ್ಧಾತ್ಮಕ ಮತ್ತು ತಂತ್ರಜ್ಞಾನ ಆಧಾರಿತ ಯುಗದಲ್ಲಿ ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಿರದೆ. ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಜವಾಬ್ದಾರಿಯುತ ಕಾರ್ಯವಾಗಬೇಕು’ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಎಸ್. ವಿ. ಡಾಣಿ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಪಿಎಂ ಉಷಾ ಪ್ರಾಯೋಜಕತ್ವ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ಸುಧಾರಿತ ಸಂಶೋಧನಾ ಪರಿಕರಗಳು ಕುರಿತು ನಡೆದ ಮೂರು ದಿನಗಳ ರಾಜ್ಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ‘ಸಂಶೋಧನೆ ಎಂದರೆ ಸತ್ಯವನ್ನು ಅನ್ವೇಷಿಸುವುದು ಮತ್ತು ಹೊಸ ಜ್ಞಾನವನ್ನು ಸಮಾಜಕ್ಕೆ ಪರಿಚಯಿಸುವುದು. ಉತ್ತಮ ಸಂಶೋಧನೆ ಮಾನವ ಕುಲದ ಅಭಿವೃದ್ಧಿಗೆ ಪೂರಕವಾಗುತ್ತದೆ. ಕೃತಕ ಬುದ್ಧಿಮತ್ತೆ ಸೇರಿದಂತೆ ಆಧುನಿಕ ತಂತ್ರಜ್ಞಾನಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಸಂಶೋಧನೆ ನಡೆಸಬೇಕು’ ಎಂದರು.

ಮುಖ್ಯ ಅತಿಥಿಯಾಗಿದ್ದ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಲ್ಲಿಕಾರ್ಜುನ ಆನಂದಹಳ್ಳಿ, ಪಿಎಂ ಉಶಾ ಸಂಚಾಲಕಿ ಸುಧಾ ಹೆಗಡೆ ಮಾತನಾಡಿದರು. ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರಕಾಶಗೌಡ, ಇತಿಹಾಸ ವಿಭಾಗದ ಪ್ರಾಧ್ಯಾಪಕಿ ವಿಜಯಲಕ್ಷ್ಮೀ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಸಂತೋಷಿಕುಮಾರಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ತಾಂತ್ರಿಕ ಅಧಿವೇಶನದಲ್ಲಿ ಕೊಪ್ಪಳ ವಿ.ವಿ. ಕುಲಸಚಿವ ರಮೇಶ್ ಕೆ. ಅವರು ಎಐ ಯುಗದಲ್ಲಿ ಸಂಶೋಧನೆ ಕುರಿತು, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದ ಕಂಪ್ಯೂಟರ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಲ್ಲಿಕಾರ್ಜುನ ಆನಂದ ಹಳ್ಳಿ ಅವರು ಸಂಶೋಧನೆ ಕಂಡು ಹಿಡಿಯುವ ಪರಿಕರಗಳು ಕುರಿತು ವಿಷಯ ಮಂಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-35-1539272607

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.