ಕುಕನೂರು: ಯಲಬುರ್ಗಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಒಂಟಿ ಮಹಿಳೆಯರು ತಮ್ಮ ದಾಖಲೆ ಹಾಗೂ ವಿವರಗಳನ್ನು ಜಿಲ್ಲಾ ಮಹಿಳಾ ಸಬಲೀಕರಣ ಘಟಕದಡಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟದೇಶ ಮಾಳೇಕೊಪ್ಪ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಮಾಜದಲ್ಲಿ ನಿಂದನೆ, ಅವಮಾನ ಹಾಗೂ ಸಂಕಷ್ಟಕರ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿರುವ ಒಂಟಿ ಮಹಿಳೆಯರ ನಿಖರ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ. ಪರಿತ್ಯಕ್ತೆ, ವಿಧವೆ ಹಾಗೂ ಅವಿವಾಹಿತ ಮಹಿಳೆಯರನ್ನು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಗುರುತಿಸಿ, ಅವರ ವಿವರಗಳನ್ನು ನಿಗದಿತ ನಮೂನೆಯಲ್ಲಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಬಳಿಕ ತಾಲ್ಲೂಕುವಾರು ಸಂಗ್ರಹಿತ ಅಂಕಿ-ಅಂಶಗಳನ್ನು ಕೇಂದ್ರ ಕಚೇರಿಗೆ ಸಲ್ಲಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಒಂಟಿ ಮಹಿಳೆಯರ ಆರ್ಥಿಕ, ಸಾಮಾಜಿಕ ಹಾಗೂ ಮಾನಸಿಕ ಸ್ಥಿತಿಗತಿಗಳ ಕುರಿತು ಸಮಗ್ರ ಮಾಹಿತಿ ಪಡೆಯುವ ಉದ್ದೇಶದಿಂದ ಈ ಸಮೀಕ್ಷೆ ಹಾಗೂ ನೋಂದಣಿ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಇದರಿಂದ ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳನ್ನು ಅರ್ಹ ಮಹಿಳೆಯರಿಗೆ ತಲುಪಿಸಲು ಅನುಕೂಲವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಅಂಗನವಾಡಿ ಕೇಂದ್ರಗಳು ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-35-1302543395

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.