ಕೊಪ್ಪಳ: ‘ಪ್ರಸ್ತುತ ಮುದುಕರು ಅಂಗಳದಲ್ಲಿದ್ದಾರೆ. ಆದರೆ ಯುವಕರು ಮನೆಯಲ್ಲಿ ಮೊಬೈಲ್ನಲ್ಲಿ ಕಾಲಹರಣ ಮಾಡುತ್ತಿದ್ದಾರೆ’ ಎಂದು ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಬೇಸರ ವ್ಯಕ್ತಪಡಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರ ನಡೆದ 2025-26ನೇ ಸಾಲಿನ ಸಹ ಪಠ್ಯ ಚಟುವಟಿಕೆಗಳ ಸಮಾರೋಪ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ಹೆಣ್ಣುಮಕ್ಕಳು ಓದಿದರೆ ಒಂದು ಶಾಲೆ ತೆರೆದಂತೆ. ಅಕ್ಷರ ಕಲಿತು ಹೆಣ್ಣುಮಕ್ಕಳು ಕುಟುಂಬವನ್ನು ಬಹಳ ಸರಳವಾಗಿ ನಿರ್ವಹಣೆ ಮಾಡುತ್ತಾರೆ. ಮಹಿಳೆಯರಿಗೆ ಎಲ್ಲ ರಂಗದಲ್ಲಿ ಪ್ರಾಶಸ್ತ್ಯ ಸಿಕ್ಕರೆ ದೇಶ ಸುಲಭವಾಗಿ ಅಭಿವೃದ್ಧಿ ಆಗುತ್ತದೆ’ ಎಂದರು.

ಹಂಪಿ ಕನ್ನಡ ವಿವಿ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕ ವೆಂಕಟಗಿರಿ ದಳವಾಯಿ ಮಾತನಾಡಿ, ‘ಮಹಿಳೆಯರ ಜ್ಞಾನ, ಸಾಮರ್ಥ್ಯ ಮತ್ತು ಧೈರ್ಯವನ್ನು ಸರಿಯಾಗಿ ಬಳಸಿಕೊಳ್ಳಬೇಕು. ಪ್ರಭುತ್ವವು ಮಹಿಳೆಯರು ಮೌನವಾಗಿರಬೇಕು ಎಂದು ಬಯಸುತ್ತಿವೆ. ಮಹಿಳೆಯರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಾಂಸ್ಕೃತಿಕವಾಗಿ ಸಬಲೀಕರಣವಾಗಬೇಕು’ ಎಂದು ಹೇಳಿದರು.

ಕಾಲೇಜಿನ ಸಾಂಸ್ಕೃತಿಕ ಘಟಕದ ಸಂಚಾಲಕಿ ಹುಲಿಗೆಮ್ಮ, ಶ್ರೀಕಾಂತ್, ಶಿಕ್ಷಣ ಪ್ರೇಮಿ ಬಿ. ಜಿ ಕರಿಗಾರ, ಪ್ರಾಚಾರ್ಯ ಗಣಪತಿ ಲಮಾಣಿ, ಉಪನ್ಯಾಸಕರಾದ ನಾಗರತ್ನ ತಮ್ಮಿನಾಳ, ಪ್ರದೀಪ್ ಕುಮಾರ, ನರಸಿಂಹ, ಶುಭ, ಸುಮಿತ್ರ, ಸುಮಯ್ಯ, ಶರಣಪ್ಪ ಮೂಲಿ. ಶಿವಪ್ರಸಾದ್ ಹಾದಿಮನಿ ಪಾಲ್ಗೊಂಡಿದ್ದರು. 2024-25 ಸಾಲಿನಲ್ಲಿ ಬಿಎಸ್ಸಿ ಭೌತಶಾಸ್ತ್ರ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಶ್ವೇತಾ ಅವರನ್ನು ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-35-177611420

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.