ವಿವರ:ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳ ಶಿಕ್ಷಣ ಮತ್ತು ಜೀವನೋಪಾಯದ ಕುರಿತು ಸಿಎಸ್‌ಆರ್ ಯೋಜನೆಯಡಿಯಲ್ಲಿ, ಕೋಟಕ್ ಎಜುಕೇಶನ್ ಫೌಂಡೇಶನ್ 12 ನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಂದ ಕೋಟಕ್ ಕನ್ಯಾ ಸ್ಕಾಲರ್‌ಶಿಪ್ 2022ಕ್ಕಾಗಿ ಅರ್ಜಿಗಳನ್ನು ಆಹ್ವಾನಿಸುತ್ತದೆ.

ಶೇ 75ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರಬೇಕು ಮತ್ತು ವಾರ್ಷಿಕ ಕುಟುಂಬದ ಆದಾಯವು ₹ 3,20,000 ಕ್ಕಿಂತ ಕಡಿಮೆ ಅಥವಾ ಸಮಾನವಾಗಿರಬೇಕು. ಸಮಾಜದ ಹಿಂದುಳಿದ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಮೆಚ್ಚುಗೆ ಪಡೆದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಂದ ವೃತ್ತಿಪರ ಪದವಿ ಕೋರ್ಸ್‌ಗಳನ್ನು ಮುಂದುವರಿಸಲು ಸಹಾಯ ಮಾಡುವ ಗುರಿಯನ್ನು ಈ ವಿದ್ಯಾರ್ಥಿವೇತನವು ಹೊಂದಿದೆ.

ಅರ್ಹತೆ:ಪ್ರತಿಷ್ಠಿತ ಸಂಸ್ಥೆಗಳಿಂದ (ಎನ್‍ಎಎಸಿ/ಎನ್‌ಐಆರ್‌ಎಫ್ ಮಾನ್ಯತೆ ಪಡೆದ) ವೃತ್ತಿಪರ ಕೋರ್ಸ್‌ಗಳಲ್ಲಿ 1 ನೇ ವರ್ಷದ ಪದವಿ ಕಾರ್ಯಕ್ರಮಗಳಿಗೆ ಪ್ರವೇಶ ಪಡೆದ ಪ್ರತಿಭಾವಂತ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು. ವೃತ್ತಿಪರ ಕೋರ್ಸ್‌ಗಳಲ್ಲಿ ಎಂಜಿನಿಯರಿಂಗ್, ಎಂಬಿಬಿಎಸ್, ಆರ್ಕಿಟೆಕ್ಚರ್, ಡಿಸೈನ್, ಇಂಟಿಗ್ರೇಟೆಡ್ ಎಲ್‌ಎಲ್‌ಬಿ ಇತ್ಯಾದಿ ವೃತ್ತಿಪರ ಪದವಿ ಕೋರ್ಸ್‌ಗಳು ಸೇರಿವೆ. ಅರ್ಜಿದಾರರು ತಮ್ಮ 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಶೇ 75 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರಬೇಕು.
ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ₹ 3,20,000 ಅಥವಾ ಅದಕ್ಕಿಂತ ಕಡಿಮೆ ಇರಬೇಕು
ಆರ್ಥಿಕ ನೆರವು: ವಾರ್ಷಿಕ₹ 1.5 ಲಕ್ಷ ದ ವರೆಗೆ

ಅರ್ಜಿ ಸಲ್ಲಿಸಲು ಕೊನೆಯ ದಿನ:30-09-2022
ಅರ್ಜಿ ಸಲ್ಲಿಸುವ ವಿಧಾನ:ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು

ಮಾಹಿತಿಗೆ: www.b4s.in/praja/KKGS12

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.