ಕೊಟ್ಟೂರು: ಮಹಿಳೆಯರು ವಿದ್ಯಾವಂತರಾದಾಗ ಮಾತ್ರ ಸಮಾಜಕ್ಕೆ ದಾರಿ ದೀಪವಾಗುತ್ತಾರೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನೀಕೇರಿ ಹೇಳಿದರು.

ಪಟ್ಟಣದ ಡೋಣೂರ ಚಾನುಕೋಟಿ ಮಠದ ಆವರಣದಲ್ಲಿ ಜಿ.ಪಂ., ತಾ.ಪಂ. ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಹಯೋಗದೊಂದಿಗೆ ಭಾನುವಾರ ನಡೆದ ಮಹಿಳಾ ಸಬಲೀಕರಣ ಹಾಗೂ ಕರಕುಶಲ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಕೇವಲ ನಾಲ್ಕು ಗೋಡೆಗಳ ಮಧ್ಯಕ್ಕೆ ಸೀಮಿತವಾಗಬಾರದು, ಈ ಸಮಾಜವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಬೇಕಾದ ಹೊಣೆಗಾರಿಕೆ ಇದೆ ಎಂದರು. ಶಿಕ್ಷಣದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ ಹಾಗಾಗಿ ಮಹಿಳೆ ಜ್ಞಾನವಂತರಾದರೆ ಕುಟುಂಬದ ನಿರ್ವಹಣೆ ಉತ್ತಮವಾಗಿರುತ್ತದೆ ಎಂದರು.

ಚಾನುಕೋಟಿ ಮಠಾಧೀಶ ಸಿದ್ಧಲಿಂಗ ಶಿವಾಚಾರ್ಯರು, ತಹಸಿಲ್ದಾರ ಜಿ.ಕೆ.ಅಮರೇಶ್ ಬಿ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಐ.ಎಂ.ದಾರುಕೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಮಾತನಾಡಿದರು. ವೀಣಾ ವಿವೇಕಾನಂದಗೌಡ, ಅಡಿಕೆ ಮಂಜುನಾಥ, ಪಾರ್ವತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-25-35024239

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.