ಕೊಟ್ಟೂರು: ‘ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಬೇಸಿಗೆ ಶಿಬಿರಗಳು ಸಹಕಾರಿ ಆಗಿವೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆನಂದಕುಮಾರ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಹ್ಯಾಳ್ಯಾ ಗ್ರಾಮದ ಅರಿವು ಕೆಂದ್ರದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಶನಿವಾರ ಏರ್ಪಡಿಸಿದ್ದ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರಗಳು ಸಹಾಯವಾಗುತ್ತದೆ. ತಾಲ್ಲೂಕಿನ 14 ಅರಿವು ಕೆಂದ್ರಗಳಲ್ಲಿ ಏಕಕಾಲಕ್ಕೆ ಬೇಸಿಗೆ ಆರಂಭವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಿಬಿರಗಳಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು’ ಎಂದು ತಿಳಿಸಿದರು.

ಎನ್.ಕೊಟ್ರೇಶ್, ಮೈದೂರು ನಾಗರಾಜ, ಗ್ರಂಥಪಾಲಕ ಬಿ.ಲೋಕೇಶ, ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-25-1022255858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.