ಬೆಂಗಳೂರು: ರಾಜ್ಯದಲ್ಲಿ ಜಾರಿಗೊಳಿಸುತ್ತಿರುವ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆ ಕೈ ಬಿಟ್ಟು ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಬಲಪಡಿಸಬೇಕು. ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆಯ (ಎಐಡಿಎಸ್ಒ) ರಾಜ್ಯ ಮಟ್ಟದ ಸಮಾವೇಶ ಆಗ್ರಹಿಸಿದೆ.

ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಸಾಹಿತಿ ಕೆ.ಮರುಳಸಿದ್ದಪ್ಪ,‘ಕರ್ನಾಟಕ ಮಾತ್ರವಲ್ಲದೇ ಹಲವು ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ಜಾರಿ ಗೊಳಿಸಲಾಗುತ್ತಿದೆ. ಜನರಿಗೆ ನೀಡಿದ ಭರವಸೆ ಈಡೇರಿಸಲು ಕೈಲಾಗದವರು ಬಾಯಿ ಮುಚ್ಚಿಸಲು ಗ್ಯಾರಂಟಿ ಯೋಜನೆ ಜಾರಿ ಮಾಡುತ್ತಿದ್ದು, ನಮಗೆ ಇಂತಹ ಯೋಜನೆಗಳು ಬೇಕಾಗಿಲ್ಲ. ಇದರ ಬದಲು ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ಗ್ಯಾರಂಟಿ ಕೊಡಿ’ ಎಂದು ಒತ್ತಾಯಿಸಿದರು.

ಸಾಹಿತಿ ಎಸ್.ಜಿ.ಸಿದ್ದರಾಮಯ್ಯ, ‘ಪ್ರಾಥಮಿಕ ಶಿಕ್ಷಣ ವ್ಯವಸ್ಥೆಯನ್ನೇ ಕರ್ನಾಟಕ ದಲ್ಲಿ ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ. ನಮ್ಮಲ್ಲಿ ಪ್ರಾದೇಶಿಕ ಪಕ್ಷ ಇದ್ದಿದ್ದರೆ ಶಿಕ್ಷಣ, ಭಾಷೆ ವಿಚಾರದಲ್ಲಿ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ’ ಎಂದು ಹೇಳಿದರು.

ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ, ‘ಶಿಕ್ಷಣ ಹಕ್ಕು ಕಾಯ್ದೆಯನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೊಳಿಸಿತು. ಈಗ ರಾಜ್ಯದಲ್ಲಿ ಶಿಕ್ಷಣ ಹಕ್ಕು ಕಾಯ್ದೆಗೆ ವಿರುದ್ದವಾದ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆ ಜಾರಿಗೊಳಿಸುತ್ತಿರುವುದು ಸಂವಿಧಾನ ವಿರೋಧಿ ಕ್ರಮ. ಶಾಲಾ ಶಿಕ್ಷಣ ಸಂಕಷ್ಟದಲ್ಲಿದ್ದು, ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ ವಿಶೇಷ ಕಾರ್ಯ ಯೋಜನೆ ರೂಪಿಸಬೇಕು’ ಎಂದರು.

ವಿಶ್ರಾಂತ ಕುಲಪತಿಗಳಾದ ಎ.ಮುರಿಗೆಪ್ಪ, ಸಬಿಹಾ ಭೂಮಿಗೌಡ, ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ದಲಿತ ಸಂಘರ್ಷ ಸಮಿತಿ ಸಂಚಾಲಕ ಗುರುಪ್ರಸಾದ್ ಕೆರಗೋಡು, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯಾಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು, ಎಐಡಿಎಸ್ಒ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಸಿದ್ದಾರ್ಥ್ ರಥ್ ಮಾತನಾಡಿದರು. ಎಐಡಿಎಸ್ಒ ರಾಜ್ಯ ಅಧ್ಯಕ್ಷೆ ಕೆ.ಎಸ್.ಅಶ್ವಿನಿ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರದ ಪರವಾಗಿ ಶಿಕ್ಷಣ ಇಲಾಖೆ ನಿರ್ದೇಶಕಿ ವಿಜಯಾ ಮನವಿ ಸ್ವೀಕರಿಸಿದರು.

ಸಮಾವೇಶದಲ್ಲಿ ಮಕ್ಕಳ ದನಿ: ಸಮಾವೇಶದಲ್ಲಿ ತಾಯಂದಿರ ಜತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳು ಆಗಮಿಸಿದ್ದರು. ಶಾಲಾ ಶಿಕ್ಷಣ ಉಳಿಸಿ ಎನ್ನುವ ಫಲಕಗಳನ್ನು ಹಿಡಿದು ಸರ್ಕಾರದ ವಿರುದ್ದ ಘೋಷಣೆ ಕೂಗಿದರು.

ಇದನ್ನು ಪ್ರಸ್ತಾಪಿಸಿದ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ, ‘ಸಮಾವೇಶಕ್ಕೆ ಮಕ್ಕಳು ಬಂದು ಯೋಜನೆ ವಿರುದ್ದ ದನಿ ಎತ್ತುವ ಸ್ಥಿತಿ ನಿರ್ಮಾಣವಾಗಿದೆ. ಇದನ್ನು ಯಾವುದೇ ಸರ್ಕಾರ ಮಾಡಬಾರದು. ಸರ್ಕಾರ ಸೂಕ್ಷ್ಮತೆ ಕಳೆದುಕೊಂಡಿರುವು ದಕ್ಕೆ ಇದು ಸಾಕ್ಷಿ’ ಎಂದು ಟೀಕಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-51-716654180

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.