ಕೆ.ಆರ್.ಪೇಟೆ: ಪಟ್ಟಣದ ಬಿ.ಜಿ.ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪೋಷಕರ ಸಭೆ ಮತ್ತು ಶಾರದಾ ಪೂಜಾ ಕಾರ್ಯಕ್ರಮ ಈಚೆಗೆ ನಡೆಯಿತು.

ಆದಿಚುಂಚನಗಿರಿ ಕ್ಷೇತ್ರದ ಹೇಮಗಿರಿ ಶಾಖಾಮಠದ ಕಾರ್ಯದರ್ಶಿ ಜೆ. ಎನ್.ರಾಮಕೃಷ್ಣೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿದರೆ ಮಾತ್ರ ದೇವಿ ಶಾರದೆ ಒಲಿಯುವಳು . ಹಾಗಾಗಿ ವಿದ್ಯೆಯ ಅಧಿದೇವತೆಗಳ ಆಶೀರ್ವಾದ ನಿಮಗೆ ಸಿಗಬೇಕಾದರೆ ಸತತ ಪರಿಶ್ರಮ ಮತ್ತು ಶ್ರದ್ಧೆಯಿಂದ ವ್ಯಾಸಂಗ ಮಾಡಬೇಕು. ಯಾವುದೇ ಯಶಸ್ಸು ಸುಖಾ ಸುಮ್ಮನೆ ಬರುವುದಿಲ್ಲ. ನಿಮ್ಮ ಶ್ರಮಕ್ಕೆ ತಕ್ಕಂತೆ ಪ್ರತಿಫಲ ದೊರೆಯುವದರಿಂದ ಕುಳಿತು ಅಧ್ಯಯನ ಮಾಡಿ ಯಶಸ್ಸು ಗಳಿಸಿರಿ ಎಂದರು.

ಸಾಹಿತಿ ಮಂಜುನಾಥ್ ಮಾತನಾಡಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶಿಕ್ಷಕರಷ್ಟೇ ಪಾತ್ರ ಪೋಷಕರದ್ದೂ ಪಾತ್ರವಿದೆ. ಸಂಸ್ಕಾರಯುತ ಶಿಕ್ಷಣ ಅವಶ್ಯವಾಗಿದ್ದು ಪರಿಕ್ಷೆಯಲ್ಲಿ ಹೆಚ್ಚು ಅಂಕ ಪಡೆಯುವದಷ್ಟೇ ಅಲ್ಲ ಗೌರವಯುತವಾದ ನಡವಳಿಕೆಯನ್ನು ವಿದ್ಯಾರ್ಥಿಗಳು ಕಲಿಯಬೇಕು. ಹೆಚ್ಚು ಶ್ರಮಪಟ್ಟರೆ ಹೆಚ್ಚು ಅಂಕಗಳು ಬರುತ್ತವೆ. ಆಗ ಅವಕಾಶಗಳು ಮನೆ ಬಾಗಿಲಿಗೆ ಬರುತ್ತವೆ ಎಂಬುದನ್ನು ಮರೆಯಬಾರದೆಂದು ಕಿವಿಮಾತು ಹೇಳಿದರು. ಪ್ರಮುಖರಾದ ಆರ್. ಶ್ರೀನಿವಾಸ್, ಜಿ.ಪಿ.ರಾಜು, ಎಸ್.ರವಿ, ವಿ.ಲೋಕೇಶ್ ಸೇರಿದಂತೆ ಬಿಜಿಎಸ್ ಶಾಲೆಯ ಪ್ರಾಂಶುಪಾಲರು ಶಿಕ್ಷಕರು ಮತ್ತು ಪೋಷಕರು ಭಾಗವಹಿಸಿದ್ದರು. ಇದಕ್ಕೂ ಮೊದಲು ಬೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಯುಕೆಜಿಯಿಂದ ಒಂದನೇ ತರಗತಿಗೆ ಪ್ರವೇಶ ಪಡೆದ ಮಕ್ಕಳಿಗೆ ಪ್ರಮಾಣಪತ್ರ ನೀಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-40-1979059373

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.