ಕೆ.ಆರ್.ಪೇಟೆ: ‘ಶಿಕ್ಷಕರಾದವರು ನಿರಂತ ಅಧ್ಯಯನ ಮಾಡುವ ಮೂಲಕ ಬೋಧನಾ ಸಾಮರ್ಥ್ಯ ವೃದ್ಧಿಸಿಕೊಂಡು ವಿದ್ಯಾರ್ಥಿಗಳಿಗೆ ಕೌಶಲಗಳ ಮೂಲಕ ಸುಲಭವಾಗಿ ಅರ್ಥೈಸಿ ಕಲಿಸಿ’ ಎಂದು ಉನ್ನತ ಶಿಕ್ಷಣ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಡಾ.ಪಿ.ಹರೀಶ್ ಹೇಳಿದರು.

ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಶಿಕ್ಷಣ ಸಂಸ್ಥೆಗಳನ್ನು ಕಟ್ಟಿದರೆ ಸಾಲದು. ಶಿಕ್ಷಕರ ಬೋಧನಾ ಸಾಮರ್ಥ್ಯವನ್ನು ಹೆಚ್ಚಿಸುವ ಕೆಲಸ ಆಗಬೇಕು. ಸಮಾಜವನ್ನು ತಿದ್ದುವುದು ಕಷ್ಠದ ಕೆಲಸ. ಆದರೆ ಶಿಕ್ಷಕರು ಮನಸ್ಸು ಮಾಡಿದರೆ ಸಮಾಜವನ್ನು ತಿದ್ದಬಹುದು. ಹಾಗಾಗಿ ತಮ್ಮ ನಡೆ, ನುಡಿ ಮತ್ತು ಬೋಧನಾ ಕೌಶಲ್ಯದ ಮೂಲಕ ಶಿಕ್ಷಕರು ವಿದ್ಯಾರ್ಥಿಗಳಿಗೆ ರೋಲ್ ಮಾಡಲ್ ಗಳಾಗಬೇಕು. ಜಾಗತಿಕ ಬದಲಾವಣೆಗೆ ತಕ್ಕಂತೆ ಶಿಕ್ಷಣ ಕ್ಷೇತ್ರದಲ್ಲೂ ಹೊಸತನ ಕಾಣಿಸಿಕೊಂಡಿದೆ. ಬದಲಾವಣೆಗಳಿಗೆ ತಕ್ಕಂತೆ ಶಿಕ್ಷಕರು ತಮ್ಮ ಬೋಧನಾ ವಿಧಾನಗಳನ್ನು ಬದಲಾವಣೆ ಮಾಡಿಕೊಳ್ಳಬೇಕು. ಕಲಿಕೆಯು ಮುಗಿದ ನಂತರ ಸಮಾಜದ ಮುಖ್ಯವಾಹಿನಿಗೆ ಬರುವ ವಿದ್ಯಾರ್ಥಿಗಳಿಗೆ ತಮ್ಮ ಬದುಕನ್ನು ಕಟ್ಟಿಕೊಳ್ಳಲು ಅಗತ್ಯವಾದ ಆತ್ಮಸ್ಥೈರ್ಯವನ್ನು ಶಿಕ್ಷಕರು ತುಂಬಬೇಕು. ಪಠ್ಯದ ಜೊತೆಗೆ ಮಾನವೀಯ ಮೌಲ್ಯದ ಶಿಕ್ಷಣವನ್ನು ನೀಡುವ ಬಗ್ಗೆ ಶಿಕ್ಷಕರು ತಯಾರಾಗಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಿಜಿಎಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಜೆ.ಎನ್.ರಾಮಕೃಷ್ಣೇಗೌಡ ಮಾತನಾಡಿ, ‘ಪೋಷಕರ ನಿರೀಕ್ಷೆಗಳನ್ನು ಸಾಕಾರಗೊಳಿಸುವ ಜವಾಬ್ದಾರಿ ನಮ್ಮ ಶಿಕ್ಷಕರಿಗೆ ಸೇರಿದೆ. ಮಕ್ಕಳಲ್ಲಿ ಆತ್ಮ ವಿಶ್ವಾಸ ತುಂಬಿ ಅವರ ಬದುಕಿನಲ್ಲಿ ಆಶಾ ಭಾವನೆಗಳನ್ನು ಮೂಡಿಸುವ ಕಾರ್ಯವನ್ನು ಶಿಕ್ಷಕರು ಮಾಡಿ’ ಎಂದು ಕರೆ ನೀಡಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಎಂ.ಕೆ.ಹರಿಚರಣತಿಲಕ್, ಕೆ.ಆರ್.ನೀಲಕಂಠ, ಪ್ರೊ.ಬಿ.ಎಂ.ಜಗದೀಶ್, ಬಿಜಿಎಸ್ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕರು, ಪ್ರಾಂಶುಪಾಲರು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-40-1651888221

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.