ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ–ಸೆಟ್‌ ಫಲಿತಾಂಶ ಪ್ರಕಟ: 6,675 ಅಭ್ಯರ್ಥಿಗಳು ಅರ್ಹ

Published 28 ಮೇ 2024, 16:16 IST
Last Updated 28 ಮೇ 2024, 16:16 IST
ಅಕ್ಷರ ಗಾತ್ರ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್‌) ತಾತ್ಕಾಲಿಕ ಫಲಿತಾಂಶ ಪ್ರಕಟವಾಗಿದ್ದು, 6,675 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.

ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಕಳೆದ ಜ.13ರಂದು ಪರೀಕ್ಷೆ ನಡೆದಿತ್ತು. 95,201 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಅರ್ಹತೆ ಪಡೆದವರಲ್ಲಿ 3,398 ಪುರುಷರು ಹಾಗೂ 3,180 ಮಹಿಳೆಯರು, 97 ಲಿಂಗತ್ವ ಅಲ್ಪಸಂಖ್ಯಾತರು ಇದ್ದಾರೆ. 350 ಮಂದಿ ಅಂಗವಿಕಲರು ಈ ಪಟ್ಟಿಯಲ್ಲಿ ಸೇರಿದ್ದಾರೆ. ಯುಜಿಸಿ ಹಾಗೂ ರಾಜ್ಯದ ಮೀಸಲಾತಿ ನಿಯಮಗಳ ಪ್ರಕಾರ ಅರ್ಹತಾ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ದಾಖಲೆಗಳ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳಿಗೆ ಇ- ಪ್ರಮಾಣ ಪತ್ರಗಳನ್ನು ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT