ಕುಕನೂರು: ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಸದುಪಯೋಗ ಪಡೆದು ಉನ್ನತ ಸ್ಥಾನಕ್ಕೆ ಬೆಳೆಯಲು ಪ್ರಯತ್ನಿಸಬೇಕು ಎಂದು ನಿವೃತ್ತ ಡಿಡಿಪಿಐ ಎನ್.ಡಿ. ಸಾಲಿ ಸಲಹೆ ನೀಡಿದರು.

ಇಲ್ಲಿನ ಅನ್ನದಾನೇಶ್ವರ ಶಾಖಾ ಮಠದಲ್ಲಿ ಕನ್ನಡ ಸಾಹಿತ್ಯ ಸಂಸ್ಕೃತಿ ಮತ್ತು ಅಭಿವೃದ್ಧಿ ಟ್ರಸ್ಟ್ ವತಿಯಿಂದ ಭಾನುವಾರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಯಶಸ್ಸು ಗಳಿಸಬೇಕು. ಸರ್ಕಾರ ವಸತಿ ನಿಲಯ ಸೇರಿದಂತೆ ಸಾಕಷ್ಟು ಪ್ರಮಾಣದಲ್ಲಿ ಶೈಕ್ಷಣಿಕ ಸೌಲಭ್ಯ ಒದಗಿಸಲು ಪ್ರಯತ್ನಿಸುತ್ತಿವೆ. ಇವುಗಳನ್ನು ಬಳಸಿ ಪಿಯುಸಿ ಹಾಗೂ ಪದವಿ ಇನ್ನಿತರ ತಾಂತ್ರಿಕ ಶಿಕ್ಷಣದಲ್ಲಿ ಪ್ರವೇಶ ಪಡೆದು ಆದರ್ಶ ವಿದ್ಯಾರ್ಥಿಗಳಾಗಿ ಎಂದು ಹಾರೈಸಿದರು.

ವಕೀಲ ಬಸವರಾಜ ಜಂಗ್ಲಿ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ದಾಸರಾಗದೆ, ಪುಸ್ತಕಗಳ ದಾಸರಾಗಿ ಉತ್ತಮ ವ್ಯಕ್ತಿತ್ವದಿಂದ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದರು.

ಮಹಾದೇವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶರಣಪ್ಪ ಕೊಪ್ಪದ, ಪೀರಸಾಬ್ ದಫೇದಾರ, ಮುರಾರಿ ಭಜಂತ್ರಿ, ರಮೇಶ್ ಗಜಕೋಶ, ಪ್ರಶಾಂತ ಅರಬೆರಳಿನ್, ಸಂಸ್ಥೆಯ ಅಧ್ಯಕ್ಷ ರುದ್ರಪ್ಪ ಭಂಡಾರಿ, ನೀಲಮ್ಮ ಶಿರೂರುಮಠ, ಶರಭಯ್ಯ ಶಿರೂರುಮಠ, ಕನಕರಾಯ ಭಜಂತ್ರಿ, ಬಸವರಾಜ ಕೊಡ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-35-127128916

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.