ಕುಂದಗೋಳ: ಗುರು–ಶಿಷ್ಯ ಪರಂಪರೆಗೆ ಭಾರತದಲ್ಲಿ ವಿಶಿಷ್ಟ ಸ್ಥಾನವಿದೆ ಎಂದು ಅರವಿಂದ ಕಟಗಿ ಹೇಳಿದರು.

ಪಟ್ಟಣದ ಗಾಂಧಿ ಹಿಂದಿ ವಿದ್ಯಾಪೀಠದ ಆವರಣದಲ್ಲಿ ಭಾನುವಾರ ಹಳೆಯ ವಿದ್ಯಾರ್ಥಿಗಳಿಂದ ಜರುಗಿದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಹಳೆಯ ವಿದ್ಯಾರ್ಥಿಗಳು ದೊಡ್ಡ ಹುದ್ದೆಯಲ್ಲಿದ್ದರೂ ಗುರುಗಳನ್ನು ನೆನೆದು ಸನ್ಮಾನಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು.

ಶಾಸಕ ಎಂ.ಆರ್. ಪಾಟೀಲ ಮಾತನಾಡಿ, ಒಂದಕ್ಷರ ಕಲಿಸಿದಾತನು ಗುರುವೇ, ಈ ಶಾಲೆಯಲ್ಲಿ ಗುರು-ಶಿಷ್ಯರ ಭಾಂಧವ್ಯದಿಂದ ಕೂಡಿದೆ ಎಂದರು. ಅಭಿನವ ಬಸವಣ್ಣಜ್ಜ, ಶಿವಾನಂದ ಸ್ವಾಮೀಜಿ ಮಾತನಾಡಿದರು.

ಮುಖ್ಯ ಶಿಕ್ಷಕ ಗುರುಸ್ವಾಮಿ ಬಾಳಿಹಳ್ಳಿಮಠ ಹಾಗೂ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಎಫ್.ಕೆ. ಬಾಳಿಹಳ್ಳಿಮಠ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಮಲ್ಲಿಕಾರ್ಜುನ ಅಕ್ಕಿ, ಚಂದ್ರಣ್ಣ ಜುಟ್ಟಲ, ಕಲ್ಲಪ್ಪ ಹರಕುಣಿ, ಉಮೇಶ ಹೆಬಸೂರ, ಮಾಲತೇಶ ಶ್ಯಾಗೋಟಿ, ಶಿವಾನಂದ ಯಲಿಗಾರ, ಬಸವರಾಜ ನೆಲಗುಡ್ಡ, ಅಡಿವೆಪ್ಪ ಭಜಂತ್ರಿ, ಉಮೇಶ ಕರ್ಜಗಿ, ಮೃತ್ಯುಂಜಯ ಜಡಿಮಠ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-24-391357989

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.