ಕುಂದಾಪುರ: ಕೋಟೇಶ್ವರದ ಲೋಟಸ್ ಎಡ್ಜ್ ಕ್ಯಾಂಪಸ್ನಲ್ಲಿ, ಸುಲೋಚನಾ ಸರ್ವೋತ್ತಮ ಎಜುಕೇಶನಲ್ ಟ್ರಸ್ಟ್ ಅಡಿಯಲ್ಲಿ ಆರಂಭಗೊಳ್ಳಲಿರುವ ‘ಚಿರಂತನ ಶಿಕ್ಷಣ ಸಂಸ್ಥೆಯ ಉದ್ಘಾಟನಾ ಸಮಾರಂಭವು ಮೇ 21ರಂದು ನಡೆಯಲಿದೆ ಎಂದು ಸಂಸ್ಥೆಯ ನಿರ್ದೇಶಕಿ ಚಿಂತನಾ ರಾಜೇಶ್ ತಿಳಿಸಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಗ್ರ ಶಿಕ್ಷಣ, ಗುಣಮಟ್ಟದ ಶಿಕ್ಷಕರ ತರಬೇತಿ ಹಾಗೂ ಮಕ್ಕಳ ಮಾನಸಿಕ ಆರೋಗ್ಯದ ಅಗತ್ಯವನ್ನು ಒಂದೇ ಸೂರಿನಡಿ ಪೂರೈಸುವ ಉದ್ದೇಶದಿಂದ ಈ ಸಂಸ್ಥೆ ಪ್ರಾರಂಭಿಸಲಾಗುತ್ತಿದೆ. ವೈಜ್ಞಾನಿಕ ಕಲಿಕಾ ಮಾದರಿಯೊಂದಿಗೆ ಮಗು ಸ್ನೇಹಿ, ಫೌಂಡೇಶನ್ ಸ್ಕೂಲ್ ಪ್ರೀ-ಸ್ಕೂಲ್ ಶಿಕ್ಷಣ ನೀಡಲಾಗುತ್ತದೆ. ಶಿಕ್ಷಕರನ್ನು ಅಣಿಗೊಳಿಸಲು ಪ್ರೀ-ಸ್ಕೂಲ್ ಟೀಚರ್ ಟ್ರೇನಿಂಗ್ ಕೋರ್ಸ್ ಆರಂಭಿಸಲಾಗುತ್ತಿದೆ ಎಂದರು.

ಪಿಯುಸಿ, ಡಿಗ್ರಿ ಆದವರು ಮಾತ್ರವಲ್ಲ, ಈ ವರ್ಷದಿಂದ ಎಸ್ಎಸ್ಎಲ್ಸಿ ಮುಗಿಸಿದವರಿಗೂ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ 2 ಬ್ಯಾಚ್ಗಳು ತರಬೇತಿ ಮುಗಿಸಿದ್ದು, ತರಬೇತಿ ಪಡೆದುಕೊಂಡವರಿಗೆ ಶೇ 100 ಉದ್ಯೋಗ ದೊರಕಿದೆ. 3ನೇ ವರ್ಷದ ದಾಖಲಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದರು.

ವಿವಿಧ ಶಾಲೆ ಹಾಗೂ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗಾಗಿ ಇನ್-ಸರ್ವಿಸ್ ಮತ್ತು ಪ್ರಿ-ಸರ್ವಿಸ್ ಪುನಶ್ಚೇತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಮಕ್ಕಳು ಮತ್ತು ಹದಿಹರೆಯದವರಿಗಾಗಿ ಶಾಲಾ ಆಧಾರಿತ ಆಪ್ತ ಸಮಾಲೋಚನೆ ಹಾಗೂ ವೃತ್ತಿಪರ ಮಾರ್ಗದರ್ಶನ ನೀಡುವ ಕೇಂದ್ರ ಪ್ರಾರಂಭಿಸಲಾಗಿದೆ. ಕೌನ್ಸೆಲಿಂಗ್ ಮತ್ತು ಮಾರ್ಗದರ್ಶನ ಕ್ಷೇತ್ರಕ್ಕೆ ಪೂರಕವಾದ ಹಾಗೂ ಕೌಶಲ ಆಧರಿತ ವೃತ್ತಿಪರ ಕೋರ್ಸ್ಗಳನ್ನು ಆರಂಭಿಸಲಾಗುತ್ತಿದೆ ಎಂದರು.

ಉದ್ಘಾಟನಾ ಸಮಾರಂಭದಲ್ಲಿ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಬಿ.ಎಂ. ಸುಕುಮಾರ್ ಶೆಟ್ಟಿ, ಶ್ರೀಮಾತಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಪ್ರಕಾಶ್ ತೋಳಾರ್, ವಲಯ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಉದ್ಯಮಿ ಕಮಲ ಕಿಶೋರ್ ಹೆಗ್ಡೆ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಅಕಾಡೆಮಿಕ್ ಲೀಡ್ ವಿಲ್ಮಾ ಡಿಸಿಲ್ವಾ, ಪ್ರಾಂಶುಪಾಲೆ ವಿನುತಾ ಬಿ.ಶೆಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-28-1017327381

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.