ಕುಂದಾಪುರ: ಮಧ್ಯಮ ಹಾಗೂ ಬಡ ವರ್ಗದ ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ಸ್ಥಾಪಿತವಾದ ಕುಂದಾಪುರ ಎಜುಕೇಷನ್ ಸೊಸೈಟಿ 50 ವರ್ಷಗಳನ್ನು ಪೂರೈಸಿದ್ದು, ಸೊಸೈಟಿ ಅಧೀನದಲ್ಲಿರುವ ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು, ವಿಕೆಆರ್ ಆಚಾರ್ಯ ಪ್ರೌಢಶಾಲೆ, ಎಚ್ಎಂಎಂ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಡಾ.ಬಿ. ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಆದ್ಯತೆ ನೀಡುತ್ತಿದ್ದೇವೆ ಎಂದು ಸೊಸೈಟಿ ಅಧ್ಯಕ್ಷ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳು ಜ್ಞಾನಾರ್ಜನೆ ಕೇಂದ್ರಗಳಾಗಬೇಕು. ವಿದ್ಯಾರ್ಥಿಗಳ ಸಾಧನೆ ಮಾರುಕಟ್ಟೆಯ ಸರಕಾಗಬಾರದು, ಬದಲಿಗೆ ಮಕ್ಕಳ ಆಸಕ್ತಿಯನ್ನು ಬೆಳೆಸುವ ವಿದ್ಯಾ ದೇಗುಲವಾಗಬೇಕು. ನಮ್ಮ ವಿದ್ಯಾ ಸಂಸ್ಥೆಗಳಲ್ಲಿ ರ್ಯಾಂಕ್ ಪಡೆಯುವವರ ಜತೆಗೆ ಕಡಿಮೆ ಅಂಕ ಬಂದವರನ್ನು ಸಹ ದಾಖಲಾತಿ ಮಾಡಿಕೊಂಡು, ಅವರನ್ನು ಮುನ್ನೆಲೆಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು. ಎಚ್ಎಂಎಂ ಶಾಲೆಯಲ್ಲಿ 1,700, ವಿಕೆಆರ್ ಆಚಾರ್ಯ ಪ್ರೌಢಶಾಲೆಯಲ್ಲಿ 600 ವಿದ್ಯಾರ್ಥಿಗಳು ಇದ್ದಾರೆ. ಒಂಬತ್ತು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಥಾನ ಪಡೆದುಕೊಂಡಿದ್ದರು. ಡಾ.ಬಿ.ಬಿ. ಹೆಗ್ಡೆ ಕಾಲೇಜು ಮಂಗಳೂರು ಮುಂಚೂಣಿಯಲ್ಲಿದ್ದು, ವಿದ್ಯಾರ್ಥಿಗಳು ರ್ಯಾಂಕ್ ಪಡೆಯುವ ಜೊತೆಗೆ, ಉದ್ಯೋಗವನ್ನೂ ಪಡೆದುಕೊಳ್ಳುತ್ತಿದ್ದಾರೆ ಎಂದರು.

ಆರ್.ಎನ್.ಶೆಟ್ಟಿ ಪ.ಪೂ. ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದ 328 ವಿದ್ಯಾರ್ಥಿಗಳಲ್ಲಿ 325 ಮಂದಿ ಉತ್ತೀರ್ಣರಾಗಿದ್ದು, ಶೇ 99 ಫಲಿತಾಂಶ ಬಂದಿದೆ. ಮೂವರು ರಾಜ್ಯ ಮಟ್ಟದ ಸ್ಥಾನ ಪಡೆದಿದ್ದಾರೆ. 140 ಮಂದಿ ಉನ್ನತ ಶ್ರೇಣಿಯಲ್ಲಿ, 161 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅನುಭವಿ ಬೋಧಕ ವರ್ಗ ಇದ್ದು, ಸಾಂಸ್ಕೃತಿಕ, ಕ್ರೀಡಾ ವಿಭಾಗದಲ್ಲೂ ತರಬೇತಿ ನೀಡಲಾಗುತ್ತದೆ ಎಂದರು.

ಕುಂದಾಪುರ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಕೆ.ಸೀತಾರಾಮ ನಕ್ಕತ್ತಾಯ, ಡಾ.ಬಿ.ಬಿ. ಹೆಗ್ಡೆ ಕಾಲೇಜು ಪ್ರಾಂಶುಪಾಲ ಕೆ.ಉಮೇಶ್ ಶೆಟ್ಟಿ, ಆರ್.ಎನ್.ಶೆಟ್ಟಿ ಪ.ಪೂ. ಕಾಲೇಜು ಪ್ರಾಂಶುಪಾಲ ನವೀನ್ ಶೆಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-28-1298571302

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.