ಕುಂದಾಪುರ: ಬಸ್ರೂರು ಶಾರದಾ ಕಾಲೇಜಿನ ಬಸ್ರೂರು ಅಪ್ಪಣ್ಣ ಹೆಗ್ಡೆ ವೇದಿಕೆಯಲ್ಲಿ ಆಹ್ವಾನಿತ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಈಚೆಗೆ ನಡೆಯಿತು.

ಪ್ರಾಕ್ತನ ವಿದ್ಯಾರ್ಥಿ ಸಟ್ವಾಡಿ ವಿಜಯ ಶೆಟ್ಟಿ ಮಾತನಾಡಿ ವ್ಯಕ್ತಿತ್ವ ರೂಪಿಸಿದ ಕಾಲೇಜು ಶಿಸ್ತು, ಮೌಲ್ಯ ಪರಿಶ್ರಮ ಮತ್ತು ಕನಸು ಸಾಧಿಸಲು ಬೇಕಾಗಿರುವ ಧೈರ್ಯವನ್ನು ಕಲಿಸಿದೆ ಎಂದರು.

ವಿದ್ಯಾರ್ಥಿಗಳ ಕನಸು ದೊಡ್ಡದಾಗಿರಬೇಕು. ಸಮಯವನ್ನು ಸರಿಯಾಗಿ ಬಳಸಿಕೊಳ್ಳಬೇಕು. ಶಿಕ್ಷಕರು ಮತ್ತು ಪೋಷಕರನ್ನು ಗೌರವಿಸಬೇಕು ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಟ್ರಸ್ಟಿ ಕೆ ಸುಭಾಶ್ಚಂದ್ರ ಶೆಟ್ಟಿ ಬಾಂಡ್ಯ, ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. ಕೋಟ ಪಡುಕೆರೆ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರಥಮ ಸ್ಥಾನ, ಬ್ರಹ್ಮಾವರ ಎಸ್.ಎಂ.ಎಸ್ ಕಾಲೇಜು ದ್ವಿತೀಯ ಸ್ಥಾನ ಹಾಗೂ ವಿದ್ಯಾಲಕ್ಷ್ಮೀ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ತೃತೀಯ ಸ್ಥಾನ ಪಡೆದುಕೊಂಡಿದೆ.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಂಡ್ಯ ಸುಧಾಕರ ಶೆಟ್ಟಿ, ಕಾಲೇಜು ಆಡಳಿತಾಧಿಕಾರಿ ಮೋಹನ ಕೆ.ಎನ್ ಹಾಗೂ ಕಾರ್ಯಕ್ರಮ ಸಂಯೋಜಕ ಡಾ.ವಿಶ್ವನಾಥ ಆಚಾರ್ಯ ಇದ್ದರು.

ಪ್ರಾಂಶುಪಾಲ ಡಾ.ದಯಾನಂದ ಎನ್ ಸ್ವಾಗತಿಸಿದರು. ಉಪನ್ಯಾಸಕ ಅಕ್ಷಯ ಹೆಗ್ಡೆ ಮೊಳಹಳ್ಳಿ ನಿರೂಪಿಸಿದರು. ಉಪನ್ಯಾಸಕ ರವಿಚಂದ್ರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-28-1173002448

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.