ಕುಂದಾಪುರ: ಮಕ್ಕಳಿಗೆ ತುಳುನಾಡಿನ ವೀರ ಕ್ರೀಡೆ ಕಂಬಳ ಹಾಗೂ ಕೃಷಿ ಸಂಸ್ಕೃತಿಯನ್ನು ಪರಿಚಯಿಸುವ ಪ್ರಯತ್ನವೊಂದು ಯಡಾಡಿ-ಮತ್ಯಾಡಿಯಲ್ಲಿ ಈಚೆಗೆ ನಡೆಯಿತು.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ‘ಮಂಥನ’ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸಾಂಕೇತಿಕವಾಗಿ ಕಂಬಳ ಪ್ರದರ್ಶನ ಅತ್ಯಂತ ವೈಭವದಿಂದ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಉಡುಪಿ ಜಿಲ್ಲಾ ಕಂಬಳ ಸಮಿತಿಯ ಸಂಚಾಲಕ ಬಾರ್ಕೂರು ಶಾಂತಾರಾಮ ಶೆಟ್ಟಿ ಮಾತನಾಡಿ, ಇಂದಿನ ಮಕ್ಕಳಿಗೆ ನಮ್ಮ ನೆಲದ ಕಲೆ, ಆಚಾರ-ವಿಚಾರ ಹಾಗೂ ಸಂಪ್ರದಾಯಗಳ ಬಗ್ಗೆ ಅರಿವು ಕಡಿಮೆಯಾಗುತ್ತಿದೆ. ಕಂಬಳದಂತಹ ಕ್ರೀಡೆಯನ್ನು ಪರಿಚಯಿಸುವ ಮೂಲಕ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಮಕ್ಕಳಲ್ಲಿ ಮಣ್ಣಿನ ಸಂಸ್ಕೃತಿಯ ಬಗ್ಗೆ ಅಭಿಮಾನ ಮೂಡಿಸುವ ಮಹತ್ತರ ಕಾರ್ಯ ಮಾಡುತ್ತಿದೆ ಎಂದರು.

ಉದ್ಯಮಿ ಸತೀಶ್ ಕೆದ್ಲಾಯಿ ಅವರ ಕೃಷಿ ಗದ್ದೆಯಲ್ಲಿ ಆಯೋಜಿಸಲಾದ ಕಂಬಳ ಪ್ರದರ್ಶನದ ಅಂಗವಾಗಿ ಕೋಣಗಳು ಗದ್ದೆಗೆ ಇಳಿಯುತ್ತಿದ್ದಂತೆ ಮಕ್ಕಳಲ್ಲಿ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಮಕ್ಕಳು, ನೇರವಾಗಿ ಕೆಸರು ಗದ್ದೆಯಲ್ಲಿ ಕಂಬಳದ ಕೋಣಗಳ ವೈಭವವನ್ನು ಕಣ್ಣಾರೆ ಕಂಡು ಆನಂದಿಸಿದರು. ಮಕ್ಕಳು ತಾವೂ ಮಣ್ಣಿ ನೊಂದಿಗೆ ಬೆರೆತು ಸಂಭ್ರಮಪಟ್ಟರು.

ಉದ್ಯಮಿ ಸತೀಶ್ ಕೆದ್ಲಾಯಿ, ಸುಮಂತ್ ಗೌಡ, ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಕೋಶಾಧಿಕಾರಿ ಭರತ್ ಶೆಟ್ಟಿ, ಮುಖ್ಯಶಿಕ್ಷಕ ಪ್ರದೀಪ್ ಶೆಟ್ಟಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-28-2066243777

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.