ಕುಂದಾಪುರ: ತಾಲ್ಲೂಕಿನ ಶಂಕರನಾರಾಯಣದ ಗ್ರಾಮೀಣ ಪ್ರದೇಶದಲ್ಲಿ 28 ವರ್ಷಗಳಿಂದ ಶಿಕ್ಷಣ ಸೇವೆ ನೀಡುತ್ತಿರುವ ಮದರ್ ತೆರೆಸಾ ಶಿಕ್ಷಣ ಸಂಸ್ಥೆಗೆ 2026ರ ‘ಇಂಡಿಯನ್ ಎಜುಕೇಷನ್ ಅವಾರ್ಡ್ಸ್’ನಲ್ಲಿ ಗ್ರಾಮೀಣ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಅಭಿವೃದ್ಧಿಯಲ್ಲಿ ಶ್ರೇಷ್ಠ ಶಾಲೆ ಮತ್ತು ಪಿಯು ಕಾಲೇಜು ಎಂಬ ಗೌರವ ಪ್ರಶಸ್ತಿ ಲಭಿಸಿದೆ.

ಉಡುಪಿ ಜಿಲ್ಲಾ ಮಟ್ಟದಲ್ಲಿ ಈ ಗೌರವ ಪಡೆದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಸಂಸ್ಥೆ ಪಾತ್ರವಾಗಿದೆ. ಬೆಂಗಳೂರಿನಲ್ಲಿ ಅನ್ಯೇಲ್ಪ ಗ್ರೂಪ್ಸ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಶಿವಶಂಕರ್ ಸ್ವಾಮೀಜಿ ಅವರಿಂದ ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್, ರೆನಿಟಾ ಲೋಬೊ ಪ್ರಶಸ್ತಿ ಸ್ವೀಕರಿಸಿದರು. ಮಾಸ್ಟರ್ ಷೆಫ್ ಸಂಜೀವ್ ಕಪೂರ್, ಮಾಜಿ ಸಾಲಿಸಿಟರ್ ಜನರಲ್ ಎನ್. ಸಂತೋಷ್ ಹೆಗ್ಡೆ, ಗಣ್ಯರು ಉಪಸ್ಥಿತರಿದ್ದರು. ಕೆ.ಜಿ. ತರಗತಿಯಿಂದ ಪಿಯುಸಿವರೆಗೆ ಶಿಕ್ಷಣ ನೀಡುತ್ತಿರುವ ಸಂಸ್ಥೆಯು, ಗ್ರಾಮೀಣ ವಿದ್ಯಾರ್ಥಿಗಳ ಅಭಿವೃದ್ಧಿಗೆ ಅರ್ಪಿಸಿಕೊಂಡಿದೆ. ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಇಲ್ಲಿನ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-28-339416029

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.