ಕುಂದಾಪುರ: ‘ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಸಹಕಾರಿಯಾಗುತ್ತವೆ’ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಎನ್ಎಸ್ಎಸ್ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸೇವಾ ಮನೋಭಾವ ಬೆಳೆಸುತ್ತವೆ ಎಂದರು.

ಪ್ರಾಂಶುಪಾಲ ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಸತ್ಯನಾರಾಯಣ, ಸಿದ್ದಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗೇಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶೇಖರ್ ಕುಲಾಲ್, ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಭೋಜ ಶೆಟ್ಟಿ, ಮುಖ್ಯಶಿಕ್ಷಕ ಚಂದ್ರ ಕುಲಾಲ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿಶ್ವನಾಥ ತುಂಬಿಕಲ್ಲಾಯ, ಪ್ರಮುಖರಾದ ರಾಮದಾಸ ಪ್ರಭು ಸಿದ್ದಾಪುರ, ಎಸ್.ಕೆ. ವಾಸುದೇವ ಪೈ, ಎನ್ಎಸ್ಎಸ್ ಯೋಜನಾಧಿಕಾರಿ ಅರುಣ್ ಎ.ಎಸ್. ಭಾಗವಹಿಸಿದ್ದರು.

ಎನ್ಎಸ್ಎಸ್ ಯೋಜನಾಧಿಕಾರಿ ರಾಮಚಂದ್ರ ಆಚಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿಯರಾದ ಅಶ್ವಿನಿ ನಿರೂಪಿಸಿದರು, ವತ್ಸಲಾ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-28-2131284827

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.