ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಗಾಂಗ ದಾನ ಮತ್ತು ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ನಡೆಯಿತು.

ದೇಹದಾನದ ಮಹತ್ವದ ಕುರಿತು ಮಾತನಾಡಿದ ಮಣಿಪಾಲದ ಕಸ್ತೂರಬಾ ಆಸ್ಪತ್ರೆ ಅಂಗಾಂಗ ಕಸಿ ವಿಭಾಗದ ಸಂಯೋಜಕಿ ಪ್ರೀತಿ ಶೆಟ್ಟಿ, ‘ಬದುಕಿರುವಾಗ ಕೆಲ ಅಂಗಾಂಗವನ್ನು ದಾನ ಮಾಡಬಹುದು. ಇದರಿಂದ ಇನ್ನೊಬ್ಬರಿಗೆ ಬದುಕನ್ನು ನೀಡಿದ ಪುಣ್ಯ ಲಭಿಸುತ್ತದೆ. ಬೇರೆ ಬೇರೆ ಕಾರಣಕ್ಕೆ ಮರಣ ಹೊಂದಿದಾಗ ಅಂಗಾಂಗ ದಾನ ಮಾಡಬಹುದು. ಆದರೆ ಬೇರೆ ಬೇರೆ ಅಂಗಾಂಗಗಳಿಗೆ ಸಮಯದ ಮಿತಿ ಇರುತ್ತದೆ. ಹೃದಯವನ್ನು ಇನ್ನೊಂದು ದೇಹಕ್ಕೆ ನೀಡಲು 4ರಿಂದ 5 ಗಂಟೆ ಮಾತ್ರವೇ ಇರುತ್ತದೆ’ ಎಂದು ದೇಹದಾನದ ಕಾನೂನು ಮತ್ತು ಪ್ರಕ್ರಿಯೆಗಳ ಕುರಿತು ವಿವರವಾಗಿ ತಿಳಿಸಿದರು.

ಕ್ಯಾನ್ಸರ್ ಜಾಗೃತಿ ಕುರಿತು ಮಾತನಾಡಿದ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ಸರ್ಜಿಕಲ್ ಅಂಕೋಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅಖಿಲ್ ಪಾಲೋಡ್, ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಕ್ಯಾನ್ಸರ್ ಕಾಯಿಲೆ ಹೆಚ್ಚಾಗುತ್ತಿದೆ. ಹಾಗಾಗಿ ಅದನ್ನು ತಡೆಯುವ ಮಾರ್ಗಗಳ ಕುರಿತು ಜಾಗೃತಿ ಮೂಡಬೇಕು ಎಂದರು.

ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಸಭಾಪತಿ ಎಸ್. ಜಯಕರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ಸತ್ಯನಾರಾಯಣ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ, ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕಿ ವಿದ್ಯಾರಾಣಿ ಹಾಜರಿದ್ದರು.

ವಿದ್ಯಾರ್ಥಿನಿಯರಾದ ಅನಿಷಾ ಲೆವಿಟ್ ನಿರೂಪಿಸಿದರು, ವೈಷ್ಣವಿ ಸ್ವಾಗತಿಸಿದರು. ಅದೀಬಾ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-28-9574545

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.