ಕುಂದಾಪುರ: ಶಿಕ್ಷಣ ಸಂಸ್ಥೆಗಳು ಪಠ್ಯದ ಚೌಕಟ್ಟಿಗೆ ಸೀಮಿತವಾಗದೆ ವೈವಿಧ್ಯಮಯ ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಕೊಂಡಾಗ ಮಾತ್ರ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟರು.

ಇಲ್ಲಿನ ಸುಜ್ಞಾನ ಪಿಯು ಕಾಲೇಜು ವತಿಯಿಂದ ವಿದ್ಯಾರಣ್ಯ ಶಾಲಾ ಆವರಣದಲ್ಲಿ ನಡೆದ ಮಂಥನ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೆಲ ವರ್ಷಗಳ ಹಿಂದೆ ಆರಂಭವಾದ ಸುಜ್ಞಾನ ಸಂಸ್ಥೆಯ ಶೈಕ್ಷಣಿಕ ಸಾಧನೆ ಪ್ರಶಂಸನೀಯ. ಇಲ್ಲಿನ ಶಿಸ್ತು ಮತ್ತು ಗುಣಮಟ್ಟದ ಶಿಕ್ಷಣಕ್ಕಾಗಿ ರಾಜ್ಯದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ಬರುತ್ತಿರುವುದು ಹೆಮ್ಮೆಯ ವಿಷಯ. ಶಿಬಿರದಲ್ಲಿ ಭಾಗವಹಿಸಿದವರಲ್ಲಿ ಶೇ 80ರಷ್ಟು ವಿದ್ಯಾರ್ಥಿಗಳು ಹೊರಗಿನವರು ಎನ್ನುವುದು ಸಂಸ್ಥೆಯ ಸಾಮಾಜಿಕ ಕಳಕಳಿಗೆ ಸಾಕ್ಷಿ. 1,500ಕ್ಕೂ ಹೆಚ್ಚು ಮಕ್ಕಳನ್ನು ಒಂದು ವಾರ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಮೇಶ್ ಶೆಟ್ಟಿ ಅವರ ತಂಡದ ಪರಿಶ್ರಮ ಅನನ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯ ರಾಜೇಶ್ ಕೆ.ಸಿ ಮಾತನಾಡಿ, ಮಕ್ಕಳಲ್ಲಿರುವ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಭೆಯನ್ನು ಜಾಗೃತಗೊಳಿಸುವ ಕೆಲಸವನ್ನು ಸುಜ್ಞಾನ ಸಂಸ್ಥೆ ಮಾಡುತ್ತಿದೆ. ಜಾದು, ಯಕ್ಷಗಾನ ಹಾಗೂ ಕಂಬಳ ಆಯೋಜನೆಯ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಇಲ್ಲಿ ಪೂರಕ ವೇದಿಕೆ ಕಲ್ಪಿಸಲಾಗಿದೆ ಎಂದರು.

ಸಂಸ್ಥೆಯ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಮಾತನಾಡಿ, 1,500 ವಿದ್ಯಾರ್ಥಿಗಳನ್ನು ವಿವಿಧ ತಂಡಗಳನ್ನಾಗಿ ವಿಂಗಡಿಸಿ, ಪ್ರತಿಯೊಬ್ಬರಿಗೂ ವೈಯಕ್ತಿಕ ಗಮನ ನೀಡುವ ಮೂಲಕ ಶಿಬಿರ ನಡೆಸಲಾಗಿದೆ. ಇಲ್ಲಿನ ಅನುಭವಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿಯಾಗಲಿ ಎಂದರು.

ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ, ಪ್ರಾಂಶುಪಾಲ ರಂಜನ್ ಶೆಟ್ಟಿ, ಮುಖ್ಯ ಶಿಕ್ಷಕ ಪ್ರದೀಪ್ ಹಾಜರಿದ್ದರು .

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-28-1159973879

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.