ಕುಣಿಗಲ್: ಪಟ್ಟಣದ ಕನ್ನಡ ಭವನದಲ್ಲಿ ಶನಿವಾರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ (ಚುನಾವಣಾಧಿಕಾರಿ) ಮಮತಾಮಣಿ, ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಜತೆಗೆ ಶಿಕ್ಷಕರ ಕರ್ತವ್ಯಕ್ಕೂ ಒತ್ತು ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆಯಾಗುತ್ತಿದ್ದು, ದಾಖಲಾತಿ ಹೆಚ್ಚಳಕ್ಕೆ ಶ್ರಮಿಸಬೇಕು. ತಾಲ್ಲೂಕಿನಿಂದ ಹೋಗುವ ಶಿಕ್ಷಕರ ಸಂಖ್ಯೆ ಹೆಚ್ಚಾಗುತ್ತಿದೆ ಬರುವವರ ಸಂಖ್ಯೆ ಕಡಿಮೆಯಾಗುತ್ತಿದೆ. 250 ಶಿಕ್ಷಕರ ಕೊರತೆ ಇದ್ದು, 22 ಶಾಲೆಗಳಲ್ಲಿ ಶಿಕ್ಷಕರಿಲ್ಲ. ಹೆಚ್ಚುವರಿ ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ. ಪ್ರಭಾವ ಬೀರಿ ನಿಯೋಜನೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಬಾರದು. ನಿಯೋಜಿತ ಶಾಲೆಯಲ್ಲಿಯೇ ಕರ್ತವ್ಯ ನಿರ್ವಹಿಸಬೇಕು ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ತಿಮ್ಮೆಗೌಡ, ರಾಜ್ಯದಲ್ಲಿ ಎರಡು ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರಿದ್ದಾರೆ. ಸಂಘದ ಪದಾಧಿಕಾರಿಗಳು ಅಧಿಕಾರಿಗಳೊಂದಿಗೆ ಸಂಘರ್ಷಕ್ಕಿಳಿಯದೆ ಶಿಕ್ಷಕ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಶಿಕ್ಷಕರ ಹಾಜರಾತಿಗಾಗಿ ತಂದಿರುವ ಕೆಎಎಎಂಎಸ್ ಪದ್ಧತಿಯನ್ನು ಶಿಕ್ಷಣಕ್ಷೇತ್ರದಿಂದ ಕೈಬಿಡುವಂತೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಉಮೇಶ್, ಉಪಾಧ್ಯಕ್ಷರಾಗಿ ಪದ್ಮಾವತಿ, ಸವಿತಾ, ಖಜಾಂಚಿ ಹನುಮಂತರಾಯಪ್ಪ, ನಿರ್ದೇಶಕ ನಟರಾಜು, ಜಿಲ್ಲಾ ಸಹ ಕಾರ್ಯದರ್ಶಿ ವಿಜಯ್ ಕುಮಾರ್ ಪದಗ್ರಹಣ ಮಾಡಿದರು.

ತುಮಕೂರು ತಾಲ್ಲೂಕು ಅಧ್ಯಕ್ಷ ನಾಗರಾಜು, ಶಿಕ್ಷಣ ಇಲಾಖೆ ನೌಕರರ ಸಹಕಾರ ಸಂಘದ ಅಧ್ಯಕ್ಷ ರಾಮಸ್ವಾಮಿ, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧಯ್ಯ, ಎಚ್.ಬಿ.ರವಿಕುಮಾರ್, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಜಯಲಕ್ಷ್ಮಿ, ಜಿಲ್ಲಾ ಸಂಘದ ಪದಾಧಿಕಾರಿಗಳಾದ ಮಂಜುಳಾ, ಮರಳುಸಿದ್ದಯ್ಯ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹರೀಶ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-17-645042132

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.