ಕುಶಾಲನಗರ: ‘ಅಬಾಕಸ್ ಕಲಿಕೆಯು ಮಕ್ಕಳ ಮಾನಸಿಕ ಬೆಳವಣಿಗೆಗೆ ಕೊತೆಗೆ ಜ್ಞಾನ ವೃದ್ಧಿಗೆ ಸಹಕಾರಿಯಾಗಿದೆ’ ಎಂದು ಸಹಾಯಕ ಎಂಜಿನಿಯರ್ ಸೈಜನ್ ಪೀಟರ್ ಹೇಳಿದರು.

ಸಮೀಪದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ಮಾರ್ಟ್ ಬ್ರೈನ್ ಅಬಾಕಸ್ ಅಕಾಡೆಮಿ ಸಹಯೋಗದೊಂದಿಗೆ ಅಬಾಕಸ್ ಕಲಿಕಾ ಉಚಿತ ತರಬೇತಿಯ ಸಮಾರೋಪ ಸಮಾರಂಭ ಹಾಗೂ ಅಬಾಕಸ್ ಕಲಿಕೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಅಬಾಕಸ್ ಕಲಿಕೆಯ ಮೂಲಕ ತಮ್ಮ ಜ್ಞಾನ ಕೌಶಲ, ವಿಶೇಷ ಕಲಿಕೆ ಸಾಮರ್ಥ್ಯ ಬೆಳೆಸಿಕೊಂಡು ಸಮಾಜದಲ್ಲಿ ಗುರುತಿಸಿಕೊಳ್ಳುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಅಬಾಕಸ್ ಕಲಿಕೆಯು ವಿದ್ಯಾರ್ಥಿಗಳ ಏಕಾಗ್ರತೆ ಮತ್ತು ಮನಸ್ಸನ್ನು ಕೇಂದ್ರೀಕರಿಸುವ ಕೌಶಲಗಳ ಕಲಿಕೆಯ ಒಂದು ಭಾಗವಾಗಿದೆ ಎಂದು ತಿಳಿಸಿದರು.

ಅಬಾಕಸ್ ತರಬೇತಿಯು ಗಣಿತದ ಕೌಶಲಗಳ ಕಾರ್ಯಕ್ಷಮತೆ ಹೆಚ್ಚಿಸುವುದರೊಂದಿಗೆ ಮಕ್ಕಳಲ್ಲಿ ಕ್ರಿಯಾತ್ಮಕ ಹಾಗೂ ತಾರ್ಕಿಕ ಶಕ್ತಿ ಉದ್ದೀಪನಗೊಳಿಸಲು ಸಹಕಾರಿಯಾಗಿದೆ. ಗಣಿತ ಕೌಶಲ ಇನ್ನಷ್ಟು ಚುರುಕುಗೊಳಿಸಲು ಸಹಕಾರಿಯಾಗಿದೆ ಎಂದರು.

ಸ್ಮಾರ್ಟ್ ಬ್ರೈನ್ ಅಬಾಕಸ್ ಅಕಾಡೆಮಿ ನಿರ್ದೇಶಕಿ ಕುಸುಮ ಎಸ್.ರಾಜ್ ಮಾತನಾಡಿ, ಮಕ್ಕಳ ಕಲಿಕೆಯ ಪ್ರತಿಭೆಯ ಅನಾವರಣಕ್ಕೆ ಅಬಾಕಸ್ ಕಲಿಕೆ ಪೂರಕವಾಗಿದೆ. ಅಬಾಕಸ್ ಕಲಿಕಾ ವಿಧಾನವು ಮಕ್ಕಳು ಮಣಿಗಳು, ಸಂಖ್ಯೆಗಳು ಮತ್ತು ಬಣ್ಣಗಳ ಮೂಲಕ ಕಲಿಯುವುದನ್ನು ಆಕರ್ಷಕವಾಗಿಸುತ್ತದೆ ಎಂದು ತಿಳಿಸಿದರು.

ಶಾಲೆಯ ಗಣಿತ ಕ್ಲಬ್ ಉಸ್ತುವಾರಿ ಶಿಕ್ಷಕಿ ಬಿ.ಎನ್.ಸುಜಾತ ಮಾತನಾಡಿದರು.ಅಬಾಕಸ್ ತರಬೇತುದಾರರಾದ ಕಾವ್ಯ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಗೈಡ್ಸ್ ಶಿಕ್ಷಕಿ ಕೆ.ಟಿ.ಸೌಮ್ಯ, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಬಿ.ಡಿ.ರಮ್ಯ, ಬಿ.ಎನ್.ಸುಜಾತ, ಅನ್ಸಿಲಾ ರೇಖಾ, ಎಸ್.ಎಂ.ಗೀತಾ, ಸಿಬ್ಬಂದಿ ಎಂ.ಉಷಾ ಪಾಲ್ಗೊಂಡಿದ್ದರು.

ಪ್ರಶಂಸನಾ ಪತ್ರ ವಿತರಣೆ: ಅಬಾಕಸ್ ಪರೀಕೆಯ 2, 3 ಮತ್ತು 4 ಹಂತದ ಪರೀಕ್ಷೆ ತೇರ್ಗಡೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಪ್ರಶಂಸನಾ ಪತ್ರ ವಿತರಿಸಲಾಯಿತು.

ಸನ್ಮಾನ: ಅಬಾಕಸ್ ಕಲಿಕಾ ತರಬೇತಿ ಸಂಘಟಿಸಲು ನೆರವು ನೀಡಿದ ದಾನಿ ಸೈಜನ್ ಪೀಟರ್, ಅಬಾಕಸ್ ಅಕಾಡೆಮಿಯ ನಿರ್ದೇಶಕಿ ಕುಸುಮ ಎಸ್.ರಾಜ್, ಅಬಾಕಸ್ ತರಬೇತಿ ಶಿಕ್ಷಕಿ ಕಾವ್ಯ ಹಾಗೂ ಶಾಲೆಯ ಗಣಿತ ಶಿಕ್ಷಕಿ ಬಿ.ಎನ್.ಸುಜಾತ ಅವರನ್ನು ಅಭಿನಂದಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-51-771102153

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.