ಕುಶಾಲನಗರ: ಬೇಸಿಗೆ ಶಿಬಿರಗಳು ಮಕ್ಕಳ ದೈಹಿಕ ಚಟುವಟಿಕೆಗಳಿಗೆ ಅತ್ಯುತ್ತಮ ವೇದಿಕೆ ಕಲ್ಪಿಸಿಕೊಡುತ್ತದೆ ಎಂದು ನಗರ ಪೊಲೀಸ್ ಠಾಣೆ ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಎಚ್.ಟಿ.ಗೀತಾ ಹೇಳಿದರು.

ಇಲ್ಲಿನ ಶಿವಧಾರೆ ಸ್ಕೂಲ್ ಆಫ್ ಡ್ಯಾನ್ಸ್ನ ಪ್ರಥಮ ವರ್ಷದ ವಾರ್ಷಿಕೋತ್ಸವ, ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಹೆಚ್ಚಿನ ಮಕ್ಕಳು ನಾನಾ ಕಾರಣಗಳಿಂದಾಗಿ ಆತ್ಮವಿಶ್ವಾಸದ ಕೊರತೆ ಎದುರಿಸುತ್ತಿರುತ್ತಾರೆ. ಇಂತಹ ಮಕ್ಕಳಿಗೆ ಬೇಸಿಗೆ ಶಿಬಿರಗಳು ಅನುಕೂಲ ಮಾಡಿಕೊಡುತ್ತವೆ ಎಂದರು.

ಮಕ್ಕಳು ದಿನದ ಬಹುತೇಕ ಅವಧಿಯನ್ನು ಟಿವಿ, ಕಂಪ್ಯೂಟರ್, ವಿಡಿಯೋ ಗೇಮ್ಗಳನ್ನು ಹೆಚ್ಚಾಗಿ ಅವಲಂಬಿಸಿದ್ದು, ಇದರಿಂದ ಅವರು ಎಲ್ಲರ ಜೊತೆಗಿದ್ದರೂ ಏಕಾಂಗಿಯಾಗಿರುತ್ತಾರೆ. ಆದರೆ ಬೇಸಿಗೆ ಶಿಬಿರದಲ್ಲಿ ಮಕ್ಕಳಲ್ಲಿರುವ ಪ್ರತಿಭೆಗೆ ವೇದಿಕೆ ಸಿಗುತ್ತದೆ. ಕೆಲವು ಮಕ್ಕಳಲ್ಲಿ ವಿಶೇಷ ಪ್ರತಿಭೆ ಇದ್ದು, ಇಂತಹ ಶಿಬಿರಗಳು ಮಕ್ಕಳಲ್ಲಿರುವ ಕಲೆ, ವಿಶೇಷ ಕೌಶಲ್ಯಗಳಿಗೆ ವೇದಿಕೆ ಕಲ್ಪಿಸಿಕೊಡುತ್ತವೆ ಎಂದು ತಿಳಿಸಿದರು

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ ಮಾತನಾಡಿ, ಮಕ್ಕಳು ಕಲಿಕೆ ಮತ್ತು ಶಾಲಾ ಪಠ್ಯಗಳನ್ನು ಓದುವುದರ ಜತೆಗೆ ಪಠ್ಯೇತರ ಚಟುವಟಿಕೆ ಬೆಳೆಸಿಕೊಳ್ಳಬೇಕು. ಇದರಿಂದ ಮನಸ್ಸಿಗೆ ಉಲ್ಲಾಸ ಹಾಗೂ ಕಲಿಕೆ ಬಗ್ಗೆ ಆಸಕ್ತಿ, ಅಭಿರುಚಿ ಮೂಡುತ್ತದೆ. ಮಕ್ಕಳ ಅಭಿರುಚಿಗಳಿಗೆ ಇಂತಹ ಬೇಸಿಗೆ ಶಿಬಿರಗಳು ಸಹಕಾರಿಯಾಗುತ್ತವೆ ಎಂದು ಹೇಳಿದರು.

ಕಾವೇರಿ ಆಂದೋಲನದ ಚಂದ್ರಮೋಹನ್, ಟಿ.ಆರ್.ಪ್ರಭುದೇವ್, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ದಿನೇಶ್ ಶೆಟ್ಟಿ, ವಕೀಲ ಶರತ್, ಮಡಿಕೇರಿ ಜಿಲ್ಲಾಸ್ಪತ್ರೆಯ ನೇತ್ರಾಧಿಕಾರಿ ಚೇತನ್ ಕುಮಾರ್, ಶಿವಧಾರೆ ನೃತ್ಯ ಸಂಸ್ಥೆಯ ನೃತ್ಯ ಸಂಯೋಜಕ ಚೇತನ್ ರವಿ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆದಂ ಎಸ್, ರಾಯಲ್ ಬಿರಿಯಾನಿ ಸೆಂಟರ್ ಮಾಲೀಕ ಬಾಷಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-51-923591886

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.