ಕುಷ್ಟಗಿ: ಗುಣಮಟ್ಟದ ಶಿಕ್ಷಣ ನೀಡುವ ನೆಪದಲ್ಲಿ ತಾಲ್ಲೂಕಿನಲ್ಲಿರುವ ಖಾಸಗಿ ಶಾಲೆಗಳು ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿವೆ ಎಂದು ಡಿವೈಎಫ್ಐ ಖಂಡಿಸಿದೆ.

ಈ ವಿಷಯ ಕುರಿತು ಭಾನುವಾರ ಇಲ್ಲಿ ಹೇಳಿಕೆ ನೀಡಿರುವ ಸಂಘಟನೆ ರಾಜ್ಯ ಸಮಿತಿ ಸದಸ್ಯರಾದ ಅಮರೇಶ ಕಡಗದ, ಲಕ್ಷ್ಮಣ, ಬಸವರಾಜ, ಆನಂದ ಹಿರೇಮನಿ, ವೀರೇಶ, ಮಂಜುನಾಥ, ರವಿ, ಯಮನೂರ, ನಾಗರಾಜ ಇತರರು, ಡೊನೇಷನ್ ಹಾವಳಿ ಗಮನಕ್ಕೆ ಬಂದರೂ ನಿಯಮ ಉಲ್ಲಂಘಿಸುತ್ತಿರುವ ಶಾಳೆಗಳ ಮೇಲೆ ಕ್ರಮ ಜರುಗಿಸದ ಶಿಕ್ಷಣ ಇಲಾಖೆ ಅಧಿಕಾರಿಗಳು ಮೌನಕ್ಕೆ ಶರಣಾಗಿರುವುದು ಅಚ್ಚರಿ ಮೂಡಿಸಿದೆ ಎಂದು ಹೇಳಿದ್ದಾರೆ.

2026-27ನೇ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ನೀಡುವ ಪ್ರಕ್ರಿಯೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆರಂಭಿಸಿವೆ. ಆರಂಭಿಕ ತರಗತಿಗೆ ಪ್ರವೇಶ ಪರೀಕ್ಷೆ ನಡೆಸಬಾರದು ಎಂದು 2009ರ ಶಿಕ್ಷಣ ಹಕ್ಕು ಕಾಯ್ದೆ ಸೆಕ್ಷನ್ 13(2)(ಬಿ) ಸ್ಪಷ್ಟವಾಗಿ ಹೇಳುತ್ತದೆ. ಒಂದು ವೇಳೆ ಪರೀಕ್ಷೆ ನಡೆಸಿದ್ದು ಕಂಡುಬಂದರೆ ₹25 ಸಾವಿರ ದಂಡ ವಿಧಿಸುವುದೂ ಸಹ ನಿಯಮದಲ್ಲಿದೆ.

ಪಾಲಕರ ಮೇಲೆ ಒತ್ತಡ ಹೇರಿ ಅಭಿವೃದ್ಧಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ನಿಯಮಗಳ ಪ್ರಕಾರ ಪ್ರವೇಶ ಶುಲ್ಕ ಪಡೆಯುವುದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಂಸ್ಥೆಗಳು ಸಾರ್ವಜನಿಕರಿಗೆ ಫ್ಲೆಕ್ಸ್ ಅಳವಡಿಸುವ ಮೂಲಕ ಮಾಹಿತಿ ನೀಡಬೇಕೆಂದು ಶಿಕ್ಷಣ ಇಲಾಖೆ ವೆಬ್ಸೈಟ್ದಲ್ಲಿ ಪ್ರಕಟಿಸಿ ಆದೇಶಿಸಿದೆ. ಆದರೆ ಶುಲ್ಕದ ವಿಷಯವನ್ನು ಮಾತ್ರ ಮರೆಮಾಚಿ ತಮ್ಮ ಶಾಲೆಯ ಪ್ರಚಾರ ಫಲಕಗಳನ್ನು ಮಾತ್ರ ಅಳವಡಿಸಿರುವುದು ಕಂಡುಬರುತ್ತಿದೆ. ಈ ಎಲ್ಲ ವಿಷಯಗಳನ್ನೂ ಪರಿಶೀಲಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಮೂಲಕ ಬಿಇಒ ಅವರಿಗೆ ಸೂಚಿಸಿದೆ. ಆದರೆ ಬಿಇಒ ಅವರು ಇಲಾಖೆಯ ಸೂಚನೆಯನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್ಲದೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ನೋಟ್ಬುಕ್, ಬ್ಯಾಗ್, ಬೂಟು, ಇತರೆ ಸಲಕರಣೆಗಳನ್ನು ಕಡ್ಡಾಯವಾಗಿ ಶಾಲೆಯಲ್ಲಿಯೇ ಖರೀದಿಸಬೇಕೆಂಬ ಅಲಿಖಿತ ನಿಯಮ ಹೊರಡಿಸಿರುವ ಖಾಸಗಿಯವರು ಶಾಲೆಗಳಲ್ಲಿ ಅಂಗಡಿಯನ್ನು ತೆರೆದಿದ್ದಾರೆ ಎಂದು ತಿಳಿಸಿದ್ದಾರೆ.

ನಿಯಮ ಉಲ್ಲಂಘಿಸುತ್ತಿರುವ ಶಾಲೆಗಳ ಪರವಾನಗಿಯನ್ನು ರದ್ದುಪಡಿಸಬೇಕು. ಅನಧಿಕೃತ ಟ್ಯೂಷನ್ ಕೇಂದ್ರಗಳನ್ನು ಮುಚ್ಚಿಸುವಂತೆ ಶಿಕ್ಷಣ ಇಲಾಖೆಯನ್ನು ಡಿವೈಎಫ್ಐ ಪ್ರಮುಖರು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-35-1578913524

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.