ಕುಷ್ಟಗಿ: ‘ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು ಕಳೆದಹೋದ ದಿನಗಳು ಮರಳಿ ಬರುವುದಿಲ್ಲ, ಹಾಗಾಗಿ ವಿದ್ಯಾರ್ಥಿಗಳು ಶಿಸ್ತು ಮತ್ತು ಪರಿಶ್ರಮದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.

ಪಟ್ಟಣದಲ್ಲಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಸ್ನೇಹ ಸಮ್ಮೇಳನ, ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತಿತರೆ ಚಟುವಟಿಕೆಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,‘ಅನ್ಯವಿಚಾರಗಳತ್ತ ಗಮನಹರಿಸದೆ ಸಕಾರಾತ್ಮಕ ಆಲೋಚನೆಗಳನ್ನು ಹೊಂದಬೇಕು. ತಾಂತ್ರಿಕವಾಗಿ ದೊರೆಯುವ ಮಾಹಿತಿ ನಮ್ಮ ಬದುಕಿಗೆ ಪೂರಕವಾಗುವಂತಿದ್ದರೆ ಮಾತ್ರ ಅದನ್ನು ಸ್ವೀಕರಿಸಬೇಕು’ ಎಂದರು.

ಕೊಪ್ಪಳ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಎಸ್.ವಿ.ಡಾಣಿ ಮಾತನಾಡಿ,‘ಶೈಕ್ಷಣಿಕ ಪ್ರಗತಿಯೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ವ್ಯಕ್ತಿತ್ವ ವಿಕಸನಕ್ಕೆ ಪೂರಕ’ ಎಂದು ಹೇಳಿದರು.

ಅಳವಂಡಿ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ನಾಗರಾಜ ಹಾವಿನಾಳ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ವಿದ್ಯಾವತಿ ಗೋಟೂರು, ಅನಿತಾ ಪಾಟೀಲ ಇತರರು ಕಾರ್ಯಕ್ರಮ ಕುರಿತು ಮಾತನಾಡಿದರು.

ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ ವಿಜೇತರಾರಿಗೆ ಬಹುಮಾನ ವಿತರಿಸಲಾಯಿತು. ಭೋಜರಾಜ, ದುರ್ಗೇಶ, ಈರಣ್ಣ ಹುರುಳಿ, ಶಿವರಾಜಕುಮಾರ, ಪ್ರೇಮವ್ವ, ಪ್ರಕಾಶ ಬಳಗಾನೂರು, ಸತ್ಯವತಿ, ಸುಧಾ ಇತರೆ ಸಿಬ್ಬಂದಿ ಇದ್ದರು. ಶಶಿಕಲಾ ಸ್ವಾಗತಿಸಿದರು. ಅಂಜುಂ ಮತೀನ್ ನಿರೂಪಿಸಿದರು. ಸಕ್ಕುಬಾಯಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-35-1534559815

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.