ಕುಷ್ಟಗಿ: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ‘ಗಾನ ಸಂಭ್ರಮ’ ಸಂಗೀತ ಕಾರ್ಯಕ್ರಮ ಪಟ್ಟಣದಲ್ಲಿ ಶುಕ್ರವಾರ (ಮೇ22) ಸಂಜೆ 6.30ಕ್ಕೆ ಸಂತೆ ಮೈದಾನದಲ್ಲಿ ನಡೆಯಲಿದೆ.

ಗೆಳೆಯರ ಬಳಗ ಮತ್ತು ಭಗತ್ಸಿಂಗ್ ಸೇವಾ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಮದ್ದಾನೇಶ್ವರ ಮಠದ ಕರಿಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಹಿಂದೂಸ್ತಾನಿ ಸಂಗೀತ ಕಲಾವಿದ ಪಂಡಿತ ಅನಂತ ಕುಲಕರ್ಣಿ ಕಾರ್ಯಕ್ರಮ ಉದ್ಘಾಟಿಸುವರು. ಸಿಪಿಐ ವಿಶ್ವನಾಥ ಹಿರೇಗೌಡರ ಅಧ್ಯಕ್ಷತೆ ವಹಿಸುವರು. ಚಲನಚಿತ್ರ ಸಂಗೀತ ನಿರ್ದೇಶಕ ರಾಜೀವ ಅಗಳಿ, ಬೆಂಗಳೂರಿನ ರಶ್ಮಿ ಶ್ರೀನಿವಾಸ, ಅರ್ಪಿತ ವೇಣು ಇತರರು ಭಾಗವಹಿಸುವರು.

ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಭಗತ್ಸಿಂಗ್ ಸಂಸ್ಥೆ ಅಧ್ಯಕ್ಷ ವಜೀರ.ಬಿ.ಗೋನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.