ಲಕ್ಷ್ಮೇಶ್ವರ: ‘ಹೆತ್ತ ಮಕ್ಕಳಿಂದಲೇ ಪೋಷಕರು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧ ಸಂಘಟಿತರಾಗಿ ಹೋರಾಟ ಮಾಡಬೇಕಿದೆ’ ಎಂದು ಹಿರಿಯ ನಾಗರಿಕರು ಮತ್ತು ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಸದಸ್ಯ ಚನ್ನಪ್ಪ ಕೋಲಕಾರ ಹೇಳಿದರು.

ಪಟ್ಟಣದ ಚಂಬಣ್ಣ ಬಾಳಿಕಾಯಿ ಅವರ ಮಿಲ್ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಂಘದ ಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು.

ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎ. ಬಳಿಗೇರ ಮಾತನಾಡಿ, ‘60 ವರ್ಷ ದಾಟಿದ ಹಿರಿಯರು ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕು. ಮನೆಯವರೊಂದಿಗೆ ಹೊಂದಿಕೊಂಡು ಜೀವನ ಸಾಗಿಸಬೇಕು. ಮುಪ್ಪಿನಲ್ಲಿ ಚಿಂತೆ ಮಾಡದೆ, ಖುಷಿಯಿಂದ ಇರಲು ಪ್ರಯತ್ನಿಸಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಆರ್. ಲಕ್ಕುಂಡಿಮಠ ಮಾತನಾಡಿ, ‘ಮೂರು ತಿಂಗಳಿಂದ ಹಿರಿಯ ನಾಗರಿಕರ ಮಾಸಾಶನ ಬಂದಿಲ್ಲ. ಇದರಿಂದಾಗಿ ಅವರು ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಮಾಸಾಶನ ಬರದವರು ಸಂಘದ ಕಾರ್ಯದರ್ಶಿ ಅವರ ಬಳಿ ಹೆಸರು ಬರೆದುಕೊಟ್ಟರೆ ಸಂಬಂಧಿಸಿದ ಇಲಾಖೆಯಲ್ಲಿ ವಿಚಾರಿಸಲಾಗುವುದು’ ಎಂದು ತಿಳಿಸಿದರು.

‘ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಎಲ್ಲ ಸೌಲಭ್ಯಗಳನ್ನು ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ’ ಎಂದರು.

ಚಂಬಣ್ಣ ಬಾಳಿಕಾಯಿ, ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶಕುಂತಲಾ ಅಳಗವಾಡಿ, ಚಂದ್ರಶೇಖರ ಸವದತ್ತಿ ಮಾತನಾಡಿದರು. ಐ.ಎಸ್. ಮಡಿವಾಳರ, ನಿಂಗಪ್ಪ ಜಾವೂರ, ಪಾರಕ್ಕ ಧರಣಿ, ಶಿವಣ್ಣ ಕುಮಸಿ, ಕೊತ್ತಲ ಮಹಾದೇವಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-23-617427001

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.