ಲಕ್ಷ್ಮೇಶ್ವರ: ತಾಲ್ಲೂಕಿನ ಕುಂದ್ರಳ್ಳಿ ತಾಂಡಾದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನೂತನ ಕೊಠಡಿ ನಿರ್ಮಾಣಕ್ಕೆ ಶಾಸಕ ಡಾ.ಚಂದ್ರು ಲಮಾಣಿ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ‘ವಿದ್ಯೆ ಇದ್ದರೆ ಜಗತ್ತನ್ನೇ ಗೆಲ್ಲಬಹುದು. ಪಾಲಕರು ತಮ್ಮ ಮಕ್ಕಳಿಗೆ ತಪ್ಪದೆ ಶಿಕ್ಷಣ ಕೊಡಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಇರುತ್ತಾರೆ. ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು’ ಎಂದರು.

ಬಿಇಒ ಎಚ್.ಎನ್. ನಾಯಕ ಮಾತನಾಡಿ, ‘ಈ ಬಾರಿ ಕ್ಷೇತ್ರ ಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ವ್ಯಾಪ್ತಿಯ ಮಕ್ಕಳು ರಾಜ್ಯಮಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ವಿಶ್ವಾಸ ಇದೆ’ ಎಂದು ಹೇಳಿದರು.

ಎಸ್ಡಿಎಂಸಿ ಅಧ್ಯಕ್ಷ ರವಿ ಲಮಾಣಿ, ಈಶಪ್ಪ ಲಮಾಣಿ, ಮಹೇಶ ಲಮಾಣಿ, ಪರಮೇಶ್ವರಪ್ಪ ಲಮಾಣಿ, ಸಂತೋಷ ರಾಠೋಡ, ಮಾನಪ್ಪ ಲಮಾಣಿ, ಮಂಜುನಾಥ ಗೌರಿ, ಬಸವರಾಜ ನಾಯಕ, ರುಬ್ಲೆಪ್ಪ ಲಮಾಣಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೀಲಪ್ಪ ಕಳಸದ, ಉಪಾಧ್ಯಕ್ಷೆ ಮಲ್ಲವ್ವ ತಳವಾರ, ರುದ್ರಯ್ಯ ಶೀಲವಂತರಮಠ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-23-1298183309

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.