ಲಕ್ಷ್ಮೇಶ್ವರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಹಿನ್ನೆಲೆಯಲ್ಲಿ ತಾಲ್ಲೂಕಿನ ರಾಮಗೇರಿ ಗ್ರಾಮದಲ್ಲಿ ಮಾನವ ಬಂಧುತ್ವ ವೇದಿಕೆ ಮತ್ತು ಏಕಲವ್ಯ ಆರ್ಟ್ ಆಫ್ ಲಿವಿಂಗ್ ಸೆಂಟರ್ ವತಿಯಿಂದ ಏಕಲವ್ಯ ಅವಾರ್ಡ್ 2026-27ನೇ ಸಾಲಿನಲ್ಲಿ ಪ್ರಾಥಮಿಕ, ಪ್ರೌಢ ಶಾಲಾ ಮಕ್ಕಳಿಗಾಗಿ ಆಯೋಜಿಸಿದ್ದ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ 10 ಮಕ್ಕಳಿಗೆ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಏಕಲವ್ಯ ಪ್ರಶಸ್ತಿ ವಿತರಿಸಲಾಯಿತು.

ಗ್ರಾಮದ ಶಿಕ್ಷಕ ಜಿ.ಬಿ.ಗಳಗನಾಥ ಅವರ ನಿವಾಸದಲ್ಲಿ ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕರಾದ ಯಲ್ಲಪ್ಪ ತಳವಾರ ಅವರ ನೇತೃತ್ವದಲ್ಲಿ ಪ್ರಶಸ್ತಿ ವಿತರಣಾ ಸಮಾರಂಭ ನೆರವೇರಿತು.

ಗ್ರಾಮದ ಹಿರಿಯರಾದ ಬಸಣ್ಣ ಬೆಟಗೇರಿ ಮಾತನಾಡಿ ‘ಈಚಿನ ದಿನಗಳಲ್ಲಿ ಮಾನವನ ಸಂಬಂಧಗಳೇ ಕೆಡುತ್ತಿವೆ. ಮನುಷ್ಯತ್ವ ನಾಶವಾಗಿ ಪಶುತ್ವ ಬೆಳೆಯುತ್ತಿರುವುದು ವಿಷಾದನೀಯ. ಸಮಾಜದಲ್ಲಿ ಮೂಢನಂಬಿಕೆಗಳನ್ನು ತೊಡೆದು ಹಾಕಿ ಮಾನವೀಯತೆ ಬೆಳೆಸುವ ಸಲುವಾಗಿ ಮಾನದ ಬಂಧುತ್ವ ವೇದಿಕೆ ಕೆಲಸ ಮಾಡುತ್ತಿರುವುದು ಶ್ಲಾಘನೀಯ’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಮಣ್ಣ ಲಮಾಣಿ, ಭೀಮಣ್ಣ ಯಂಗಾಡಿ, ರಾಜು ಓಲೇಕಾರ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-23-578312649

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.