ಲಕ್ಷ್ಮೇಶ್ವರ: ಬಾಲ್ಯದಲ್ಲಿ ದೊರೆಯುವ ಶಿಕ್ಷಣ ಮತ್ತು ಸಂಸ್ಕೃತಿಯ ಮೌಲ್ಯಗಳು ಜೀವನಪೂರ್ತಿ ಉಳಿಯುತ್ತವೆ. ಆದ್ದರಿಂದ ಬಾಲ್ಯದಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಮತ್ತು ಸಂಪ್ರದಾಯ ಕಲಿಸಬೇಕು ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.

ಗುರುವಾರ ಪಟ್ಟಣದ 15 ವಾರ್ಡಿನಲ್ಲಿನ ತಾಯಿ ಪಾರ್ವತಿ ಮಕ್ಕಳ ಬಳಗದ ಹತ್ತಿರದ ದ್ಯಾಮವ್ವ ದೇವಿ ದೇವಸ್ಥಾನ ಪಕ್ಕದಲ್ಲಿ 194 ನೇ ಅಂಗನವಾಡಿ ಕೇಂದ್ರ ಸಂಖ್ಯೆ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮ ನೇರವೇರಿಸಿ ಅವರು ಮಾತನಾಡಿದರು.

ನಗರ ಯೋಜನೆ ಅಡಿಯಲ್ಲಿ ₹20 ಲಕ್ಷ ವೆಚ್ಚದಲ್ಲಿ ನೂತನ ಅಂಗನವಾಡಿ ಕಟ್ಟಡ ಸುಸಜ್ಜಿತವಾಗಿ ನಿರ್ಮಾಣ ಮಾಡುವ ಕಾರ್ಯವನ್ನು ಮಾಡಲಾಗುತ್ತಿದೆ. ಬಾಡಿಗೆ ಕಟ್ಟಡದಲ್ಲಿ ಇರುವ ಅಂಗನವಾಡಿ ಕೇಂದ್ರಗಳೆಲ್ಲಕ್ಕೂ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಪ್ರಯತ್ನ ಮಾಡುತ್ತೇನೆ ಎಂದರು

ಪುರಸಭೆ ಮಾಜಿ ಸದಸ್ಯ ರಾಜೀವ್ ಕುಂಬಿ ವಾರ್ಡನಲ್ಲಿ ಹಲವಾರು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರವಿತ್ತು ಈ ಬಗ್ಗೆ ಹಲವಾರು ಬಾರಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಗಮನ ತಂದು ಪುರಸಭೆಯಿಂದ ಜಾಗ ಕಲ್ಪಿಸಲಾಗಿತ್ತು. ಇದೀಗ ಸ್ವಂತ ಕಟ್ಟಡ ನಿರ್ಮಾಣವಾಗುತ್ತಿರುವುದು ಸಂತಸ ತಂದಿದೆ ಎಂದರು.

ಈ ವೇಳೆ ಪುರಸಭೆ ಮಾಜಿ ಸದಸ್ಯ ಶಂಕ್ರಪ್ಪ ಗುರಿಕಾರ. ಸಂಜೀವ ದೇಸಾಯಿ, ಗಂಗಾಧರ ಮೆಣಸಿನಕಾಯಿ, ಬಸವರಾಜ ಚಕ್ರಸಾಲಿ, ಸಿಡಿಪಿಓ ಮೃತ್ಯುಂಜಯ ಗುಡ್ಡದಾನ್ವೇರಿ, ಅಂಗನವಾಡಿ ಮೇಲ್ವಿಚಾರಕಿ ನಂದಾ ನವಲೆ, ಪ್ರವೀಣ ಬೋಮಲೆ , ಭೀಮಣ್ಣ ಯಂಗಾಡಿ, ವಿಜಯ ಕುಂಬಾರ, ಗಿರೀಶ ಚೌರಡ್ಡಿ, ವಿಶಾಲ ಬಟಗುರ್ಕಿ, ಅಂಗನವಾಡಿ ಕಾರ್ಯಕರ್ತೆಯರಾದ ಡಿ.ವಿ.ಕೊಟ್ಟೂರ, ನಾಗಲಕ್ಷ್ಮಿ ಕುಲಕರ್ಣಿ, ರೂಪಾ ಕಟ್ಟಿಮನಿ, ಎಂ.ಎನ್.ಚತ್ರದ, ಆರ್.ಎಸ್.ಚಂಗಾಪೂರ ಸಹಾಯಕಿಯರಾದ ನೀಲವ್ವ ಪೂಜಾರ, ಸಂಗೀತ ಸರ್ವೆದೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-23-1628666393

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.