ಲಕ್ಷ್ಮೇಶ್ವರ: ಇಲ್ಲಿನ ಜಗದ್ಗುರು ವೀರ ಗಂಗಾಧರ ಸಮುದಾಯ ಭವನದಲ್ಲಿ ಮೇ 20ರಿಂದ 22ರವರೆಗೆ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ, ಭಾರತೀಯ ಭಾಷಾ ಸಂಸ್ಥೆ, ಉನ್ನತ ಶಿಕ್ಷಣ ಇಲಾಖೆ ಶಿಕ್ಷಣ ಸಚಿವಾಲಯ ಭಾರತ್ ಸರ್ಕಾರ, ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಲಕ್ಷ್ಮೇಶ್ವರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಪುಲಿಗೆರೆ ಪರಿಸರದ ಪ್ರಾಚೀನ ಕನ್ನಡ ಸಾಹಿತ್ಯ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣ ಜರುಗಲಿದೆ.

ಗದುಗಿನ ತೋಂಟದಾರ್ಯ ಮಠದ ಜಗದ್ಗುರು ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿಕೊಳ್ಳಲಿದ್ದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ ಉದ್ಘಾಟಿಸುವರು. ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.

ಶಾಸಕ ಡಾ.ಚಂದ್ರು ಲಮಾಣಿ, ಮಾಜಿ ಶಾಸಕರಾದ ಗಂಗಣ್ಣ ಮಹಾಂತಶೆಟ್ಟರ, ಜಿ.ಎಸ್. ಗಡ್ಡದೇವರವ್ಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಪ್ರೊ.ಶಿವಪ್ರಕಾಶ್ ಶಿಗ್ಲಿ, ಡಾ.ಆರ್.ಬಿ. ಬನ್ನೂರ, ಪ್ರೊ.ಆರ್.ಎನ್. ಪಾಟೀಲ ಭಾಗವಹಿಸುವರು. 21ರಂದು ಪುಲಿಗೆರೆಯ ಶಾಸನಗಳ ಬಗ್ಗೆ ನಿವೃತ್ತ ಕೆಎಎಸ್ ಅಧಿಕಾರಿ ಹನುಮಾಕ್ಷಿ ಗೋಗಿ, ಪುಲಿಗೆರೆಯ ಐತಿಹಾಸಿಕ ಹಿನ್ನೆಲೆ ಕುರಿತು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಶಾಸನಶಾಸ್ತ್ರ ವಿಭಾಗದ ಅಮರೇಶ ಯರಗಲ್ಲ, ಪುಲಿಗೆರೆಯ ತಿರುಳನ್ನಡ ಕುರಿತು ದೇವರೆಡ್ಡಿ ಹದ್ದಿ, ಪಂಪನ ಕಾವ್ಯಗಳ ಕುರಿತು ಡಾ.ಶಾಂತಿನಾಥ ದಿಬ್ಬದ, ಸುರಂಗ ಕವಿಯ ತ್ರಿಶಿಷ್ಠ ಲಕ್ಷಣ ಪುರಾಣ ಬೆಂಗಳೂರು ವಿಶ್ವವಿದ್ಯಾಲಯದ ಡಾ.ನಾಗಭೂಷಣ, ಅಚಣ್ಣ ಕವಿಯ ವರ್ಧಮಾನ ಪುರಾಣ ಬಗ್ಗೆ ರಾಜಶೇಖರ್ ಉಪನ್ಯಾಸ ನೀಡುವರು.

22ರಂದು ಪುಲಿಗೆರೆಯ ಸೋಮ ಮತ್ತು ಆದಯ್ಯ ಕುರಿತು ಹಂಪಿ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದ ನಿವೃತ್ತ ಮುಖ್ಯಸ್ಥ ಡಾ.ಕೆ.ರವೀಂದ್ರನಾಥ್ ಮತ್ತು ಪುಲಿಗೆರೆ ಕುರಿತ ಸಾಹಿತ್ಯ ಕುರಿತು ಲಲಿತಾ ಕೆರಿಮನಿ ಉಪನ್ಯಾಸ ನೀಡುವರು. ಮಧ್ಯಾಹ್ನ 2 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕನ್ನಡ ಹಂಪಿ ವಿಶ್ವವಿದ್ಯಾಲಯದ ಕುಲಪತಿ ಡಿ.ವಿ. ಪರಮಶಿವಮೂರ್ತಿ ಸಮಾರೋಪ ಭಾಷಣ ಮಾಡುವರು. ಯೋಜನಾ ನಿರ್ದೇಶಕ ಎನ್.ಎಂ. ತಳವಾರ ಅಧ್ಯಕ್ಷತೆ ವಹಿಸುವರು. ಮೂರು ದಿನ ನಡೆಯುವ ಪರಿಸರದ ಪ್ರಾಚೀನ ಕನ್ನಡ ಸಾಹಿತ್ಯ ರಾಜ್ಯಮಟ್ಟದ ವಿಚಾರ ಸಂಕಿರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಈಶ್ವರ ಮೆಡ್ಲೇರಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-23-1273632518

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.