ಲಕ್ಷ್ಮೇಶ್ವರ: ಜೂನ್ 1ರಿಂದ ಶೈಕ್ಷಣಿಕ ವರ್ಷ ಶುರುವಾಗಲಿದ್ದು, ಶಾಲೆಗಳ ಆರಂಭಕ್ಕಾಗಿ ಎಲ್ಲ ಸಿದ್ಧತೆಗಳು ಭರದಿಂದ ನಡೆದಿವೆ. ಶಾಲೆಗಳು ಆರಂಭ ಆಗುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಸ್ವಚ್ಛತಾ ಕಾರ್ಯಗಳು ಭರದಿಂದ ಸಾಗಿವೆ. ಶಾಲೆಗಳ ಆವರಣ ಸೇರಿ ತರಗತಿಗಳ ಸ್ವಚ್ಛತೆಯಲ್ಲಿ ಶಿಕ್ಷಕ ಸಿಬ್ಬಂದಿ ಮಗ್ನವಾಗಿದ್ದ ದೃಶ್ಯಗಳು ಗುರುವಾರ ಕಂಡು ಬಂದವು.

ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಬುಧವಾರ ಹಾಗೂ ಗುರುವಾರ ಶಾಲಾ ಸ್ವಚ್ಛತಾ ಕಾರ್ಯ ಸಂಪೂರ್ಣಗೊಂಡಿದೆ. ಶಾಲಾ ಕೊಠಡಿ, ಆವರಣ, ಮೂತ್ರಾಲಯ ಹಾಗೂ ಶೌಚಾಲಯಗಳು, ಕುಡಿಯುವ ನೀರಿನ ಟ್ಯಾಂಕ್ಗಳ ಸ್ವಚ್ಛತೆ ಹಾಗೂ ಮಧ್ಯಾಹ್ನದ ಬಿಸಿಯೂಟದ ಕೊಠಡಿ, ಪಾತ್ರೆ ಪರಿಕರಗಳನ್ನು ಸ್ವಚ್ಛಗೊಳಿಸಲಾಯಿತು.

ಶಾಲಾ ಪ್ರಾರಂಭದ ಮೊದಲ ದಿನದಿಂದಲೇ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ, ಸಿಹಿಯೂಟ ನೀಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ‘ಇಲಾಖೆಯ ಮಾರ್ಗದರ್ಶನದಂತೆ ದಾಖಲಾತಿ ಆಂದೋಲನ, ಸೇತುಬಂಧ ಪರೀಕ್ಷೆ ಮತ್ತಿತರ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಸಮುದಾಯ ಹಾಗೂ ಎಸ್ಡಿಎಂಸಿ ಸದಸ್ಯರ ಸಹಕಾರದೊಂದಿಗೆ ಈ ಬಾರಿ ಹೆಚ್ಚಿನ ದಾಖಲಾತಿಯನ್ನು ಮಾಡುವ ಗುರಿ ಹೊಂದಲಾಗಿದೆ’ ಎಂದು ಮುಖ್ಯ ಶಿಕ್ಷಕ ಬಿ.ಎಂ. ಕುಂಬಾರ ತಿಳಿಸಿದರು. ಅದರಂತೆ ತಾಲ್ಲೂಕಿನ ಎಲ್ಲ ಶಾಲೆಗಳಲ್ಲೂ ಸ್ವಚ್ಛತಾ ಕಾರ್ಯಗಳು ಭರದಿಂದ ಸಾಗಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-23-333915533

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.