ಲಿಂಗಸುಗೂರು: ‘ತಾರತಮ್ಯ ಮುಕ್ತ, ಸಮಾನತೆಯ ಮಾನವತಾವಾದಿ ಸಮಾಜ ನಿರ್ಮಾಣದ ಬಗ್ಗೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಕನಸು ಕಂಡಿದ್ದರು. ಆ ಕನಸು ನನಸು ಮಾಡಲು ಅವಿರತವಾಗಿ ಹೋರಾಟ ಮಾಡಿದ್ದರು’ ಎಂದು ಉಪವಿಭಾಗಾಧಿಕಾರಿ ಬಸವಣಪ್ಪ ಕಲಶೆಟ್ಟಿ ಹೇಳಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಗಳವಾರ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಡಾ.ಬಿ.ಆರ್.ಅಂಬೇಡ್ಕರ್ ಮಹಿಳೆ ಯರಿಗೆ ಶಿಕ್ಷಣ, ಆಸ್ತಿ ಹಕ್ಕು ಮತ್ತು ಸಮಾನತೆ ಸಿಗಬೇಕು ಎಂದು ಹಂಬಲಿ ಸಿದ್ದರು. ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂದು ಸರ್ವರಿಗೂ ಮತದಾನದ ಹಕ್ಕು ನೀಡುವ ಮೂಲಕ ತಮಗೆ ಬೇಕಾದ ಚುನಾಯಿತ ಪ್ರತಿನಿಧಿಯನ್ನು ಆಯ್ಕೆ ಮಾಡುವ ಅಧಿಕಾರ ನೀಡಿದ್ದರು’ ಎಂದರು.

ಶಾಸಕ ಮಾನಪ್ಪ ವಜ್ಜಲ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಪಾಮಯ್ಯ ಮುರಾರಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಕರಡಕಲ್, ಎಪಿಎಂಸಿ ಅಧ್ಯಕ್ಷ ಅಮರೇಶ ಹಿರೇಹೆಸರೂರು, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಸಿದ್ಧರಾಮೇಶ ಪಾಗದ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವೆಂಕಟೇಶ ಗುತ್ತೇದಾರ, ಟಿಎಪಿಸಿಎಂಎಸ್ ಅಧ್ಯಕ್ಷ ಶಶಿಧರ ಪಾಟೀಲ ಆಶಿಹಾಳ, ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್, ತಹಶೀಲ್ದಾರ್ ಸತ್ಯಮ್ಮ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ, ಪಿಐ ಹೊಸಕೇರಪ್ಪ, ಸಮಾಜ ಕಲ್ಯಾಣಾಧಿಕಾರಿ ರವೀಂದ್ರ ಉಪ್ಪಾರ, ಸಿಡಿಪಿಒ ನಾಗರತ್ನ, ಬಿಇಒ ಸುಜಾತ ಹೂನೂರು, ಟಿಎಚ್ಓ ಡಾ.ಅಮರೇಶ ಪಾಟೀಲ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-32-374686775

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.