ಲಿಂಗಸುಗೂರು: ‘ಧರ್ಮ, ಜಾತಿ ಹೆಸರಿನಲ್ಲಿ ಮಕ್ಕಳ ಮನಸ್ಸು ವಿಕಾರಗೊಳಿಸಬೇಡಿ. ರಂಗಭೂಮಿ ಕಲೆಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹ ನೀಡಿದರೆ ಮಕ್ಕಳ ಮನಸ್ಸು ವಿಕಸನಗೊಳ್ಳಲು ಸಾಧ್ಯವಿದೆ’ ಎಂದು ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ಹೇಳಿದರು.

ಪಟ್ಟಣದ ವೀರಶೈವ ವಿದ್ಯಾವರ್ಧಕ ಸಂಘದ ಬಸವ ಸಭಾಂಗಣದಲ್ಲಿ ಕರ್ನಾಟಕ ನಾಟಕ ಅಕಾಡೆಮಿ, ಜನರಂಗ, ಮಹಿಳಾ ಸ್ವ ಸಹಾಯ ಸಂಘ ಮತ್ತು ಅಮರೇಶ್ವರ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಆಟ-ಕೂಟ ಮಕ್ಕಳ ರಂಗ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಇತ್ತೀಚಿಗೆ ಇಂದು ಜಾತಿ, ಧರ್ಮದ ಹೆಸರಿನಲ್ಲಿ ಸ್ವಾರ್ಥ ಅಧಿಕಾರ ಲಾಲಸೆ ಹೆಚ್ಚುತ್ತಿದೆ. ಧರ್ಮವೆಂಬುದು ಅಫೀಮು ಇದ್ದಹಾಗೆ. ದೇಶ ದೇಶಗಳ ಮಧ್ಯೆ ಧರ್ಮ ಮತ್ತು ಅಧಿಕಾರದ ಹೆಸರಿನಲ್ಲಿ ಯುದ್ಧಗಳು ನಡೆಯುತ್ತಿರುವುದು ಕಳವಳಕಾರಿಯಾಗಿದೆ. ಧರ್ಮ, ಜಾತಿ ಹೆಸರಿನಲ್ಲಿ ನಡೆಯುತ್ತಿರುವ ಯುದ್ಧಗಳಿಗೆ ಕಡಿವಾಣ ಹಾಕಬೇಕಿದೆ. ಧರ್ಮದ ಹೆಸರಿನಲ್ಲಿ ಮಕ್ಕಳ ಮನಸ್ಸು ದುರ್ಬಲಗೊಳಿಸಬಾರದು. ಅಧಿಕಾರ ಲಾಲಸೆಗಾಗಿ ನಡೆಯುವ ಯುದ್ಧಗಳು ಯಶಸ್ವಿಯಾಗುವುದಿಲ್ಲ’ ಎಂದರು.

‘ರಂಗಭೂಮಿ ಎಂಬುದು ಸುಸಂಸ್ಕೃತ ಸಮಾಜ ನಿರ್ಮಿಸುವಲ್ಲಿ ಮತ್ತು ಪ್ರತಿಭೆಗಳನ್ನು ಗುರುತಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿತ್ತು. ಆದರೆ ಇತ್ತೀಚಿಗೆ ರಂಗಭೂಮಿ ಕಲೆ ನಿರ್ಲಕ್ಷಕ್ಕೆ ಒಳಗಾಗಿದೆ. ರಂಗಭೂಮಿಯು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ರಂಗಭೂಮಿಯಿಂದ ಚಲನಚಿತ್ರದಲ್ಲಿ ನಟಿಸಿ ಗುರುತಿಸಿಕೊಂಡವರು ಸಾಕಷ್ಟು ಕಲಾವಿದರನ್ನು ನಾವು ಕಾಣುತ್ತೇವೆ. ಜಾತಿ, ಮತ, ಪಂಥ ಬೇಧವಿಲ್ಲದೆ ಕೇವಲ ಪ್ರತಿಭೆಗಳನ್ನು ಗುರುತಿಸುವ ಕ್ಷೇತ್ರ ರಂಗಭೂಮಿಯಾಗಿದೆ. ಮಕ್ಕಳ ಮನಸ್ಸನ್ನು ವಿಕಾಸಗೊಳಿಸುವ ಹಿನ್ನೆಲೆಯಲ್ಲಿ ಹಾಗೂ ಮಕ್ಕಳಿಗೆ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ ಅವರಲ್ಲಿನ ಪ್ರತಿಭೆಗಳನ್ನು ಗುರುತಿಸುವ ಉದ್ದೇಶದಿಂದ ಕಲಾವಿದ ಪ್ರಭುರಾಜು ಅವರು ಕಳೆದ 27 ದಿನಗಳಿಂದ ಮಕ್ಕಳಿಗೆ ರಂಗ ಶಿಬಿರ ನಡೆಸಿ ನಾಟಕ ಕಲಿಸಿ ವೇದಿಕೆ ಕಲ್ಪಿಸಿರುವುದು ಸಂತೋಷ ತಂದಿದೆ’ ಎಂದು ಹೇಳಿದರು.

ಮಾಜಿ ಶಾಸಕ ಡಿ.ಎಸ್.ಹೂಲಗೇರಿ, ವಿವಿ ಸಂಘದ ಆಡಳಿತಾಧಿಕಾರಿ ಬಸವಂತರಾಯ ಕುರಿ, ನಿವೃತ್ತ ಪ್ರಾಚಾರ್ಯ ಸಿ.ಶರಣಪ್ಪ, ಎಪಿಎಂಸಿ ಅಧ್ಯಕ್ಷ ಅಮರೇಶ ಹೆಸರೂರು, ರಂಗಭೂಮಿ ನಿರ್ದೇಶಕ ಶಂಕರಯ್ಯ ಘಂಟಿ, ಶಿಬಿರ ನಿರ್ದೇಶಕ ಪ್ರಭುರಾಜ, ಉಪನ್ಯಾಸಕ ಮಹಾಂತೇಶ ಮಸ್ಕಿ, ಮುಖಂಡರಾದ ಪಂಪಣ್ಣ ಗುಂಡಳ್ಳಿ, ಎಂ.ಡಿ.ರಫಿ, ಸಂತೋಷ ಸೊಪ್ಪಿಮಠ, ವೀರೇಶಗೌಡ, ನರೇಶರಡ್ಡಿ ಮುನ್ನೂರು ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-32-480722740

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.