ಲಿಂಗಸುಗೂರು: ‘ವೃತ್ತಿ ಅವಕಾಶಗಳಿಗೆ ಪಾಲಿಟೆಕ್ನಿಕ್ ಡಿಪ್ಲೊಮಾ ತಾಂತ್ರಿಕ ಶಿಕ್ಷಣ ತುಂಬಾ ಸಹಕಾರಿ’ ಎಂದು ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಮಲ್ಲಪ್ಪ ಸರ್ಜಾಪುರ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘2008-09ನೇ ಸಾಲಿನಿಂದ ಪಟ್ಟಣದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆರಂಭಗೊಂಡಿದೆ. ಕಾಲೇಜಿನಲ್ಲಿ ಆಟೊ ಮೊಬೈಲ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, ಸಿವಿಲ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ಸೇರಿ ಒಟ್ಟು 5 ಕೋರ್ಸ್ಗಳಿವೆ’ ಎಂದು ಹೇಳಿದರು.

‘ಕಡಿಮೆ ಶುಲ್ಕ ಪಾವತಿ ಮಾಡಿ, ಎಸ್ಎಸ್ಎಲ್ಸಿ ಪಾಸಾದ ವಿದ್ಯಾರ್ಥಿಗಳ ಪ್ರವೇಶಾತಿ ಪಡೆಯಲು ಅವಕಾಶ ನೀಡಲಾಗಿದೆ. ಸತತ ಶೇ 100ರಷ್ಟು ಪ್ರವೇಶಾತಿ ಪಡೆದು ಇಲಾಖೆಯ ಪ್ರಶಂಸೆಗೆ ಪಾತ್ರವಾಗಿದೆ. ನುರಿತ ಹಾಗೂ ಅನುಭವಿ ಉಪನ್ಯಾಸಕರಿದ್ದು, ಸುಸಜ್ಜಿತ ಕೊಠಡಿ, ಪ್ರಯೋಗಾಲಯ, ಗ್ರಂಥಾಲಯ ಹಾಗೂ ಸ್ಮಾರ್ಟ್ ಕಲಿಕಾ ಕೊಠಡಿಗಳ ಸೌಲಭ್ಯ ಹೊಂದಿದೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನದ ಮೂಲಕ ಉದ್ಯೋಗಾವಕಾಶ ಕಲ್ಪಿಸಲಾಗುತ್ತಿದೆ’ ಎಂದರು.

‘ಈ ಭಾಗದ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಪಾಲಿಟೆಕ್ನಿಕ್ ತಾಂತ್ರಿಕ ಶಿಕ್ಷಣದ ಬಗ್ಗೆ ಅರಿವು ಇದ್ದಿಲ್ಲ. ಕಳೆದ ಎರಡು ವರ್ಷಗಳಿಂದ ತಾಲ್ಲೂಕಿನ ಪ್ರತಿಯೊಂದು ಪ್ರೌಢಶಾಲೆಗೆ ಭೇಟಿ ನೀಡಿ ತಾಂತ್ರಿಕ ಶಿಕ್ಷಣದ ಮಹತ್ವ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜಾಗೃತಿ ಮೂಡಿಸಲಾಗಿದೆ’ ಎಂದು ಹೇಳಿದರು.

ಉಪನ್ಯಾಸಕರಾದ ಬಸಲಿಂಗಪ್ಪ ಐದನಾಳ, ಅಮರೇಶ ಛಾವಣಿ, ಸಂಜೀವರೆಡ್ಡಿ ಪಾಟೀಲ ಸೇರಿದಂತೆ ಇನ್ನಿತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-32-1318602536

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.