ಲಿಂಗಸುಗೂರು: ಖಾಸಗಿ ಶಾಲಾ–ಕಾಲೇಜುಗಳಲ್ಲಿ ಡೊನೇಷನ್ ಹಾವಳಿ ತಡೆಗಟ್ಟಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಉಪವಿಭಾಗಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಪೋಷಕರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಖಾಸಗಿ ಶಾಲಾ–ಕಾಲೇಜುಗಳು ಅಭಿವೃದ್ಧಿ ಶುಲ್ಕದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಅಕ್ರಮ ವಂತಿಗೆ ಪಡೆಯುತ್ತಿದ್ದಾರೆ. ಮಕ್ಕಳಿಗೆ ನೋಟ್ಬುಕ್, ಸಮವಸ್ತ್ರ, ಶೂಗಳನ್ನು ಶಾಲಾ–ಕಾಲೇಜಿನಲ್ಲಿಯೇ ಹೆಚ್ಚಿನ ದರಕ್ಕೆ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ದೂರಿದರು.

ಮಕ್ಕಳಿಗೂ ಪ್ರವೇಶ ಪರೀಕ್ಷೆ ನಡೆಸಿ ಆರ್.ಟಿ.ಇ ಸೆಕ್ಷನ್ 13(2)(ಬಿ) ನಿಯಮಗಳನ್ನು ಉಲ್ಲಂಘಿಸುತ್ತಿರುವುದು, ಶಾಲಾ–ಕಾಲೇಜುಗಳಲ್ಲಿ ಅನಧಿಕೃತವಾಗಿ ಕೋಚಿಂಗ್ ಸೆಂಟರ್ ನಡೆಯುತ್ತಿರುವ ಪಿಯು ಕಾಲೇಜುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.

‘ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಗಣನೀಯವಾಗಿ ಹೆಚ್ಚಿದೆ. ವಿದ್ಯಾರ್ಥಿಗಳು ಪಿಯುಸಿ ದಾಖಲಾತಿಗೆ ಕಾಲೇಜುಗಳತ್ತ ಮುಖ ಮಾಡಿದ್ದಾರೆ. ಇಲಾಖೆ ನಿಗದಿ ಪಡಿಸಿದ ಶುಲ್ಕದ ವಿವರ ಪಟ್ಟಿಯನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಕದೇ ಇರುವುದರಿಂದ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕ, ವಾರ್ಷಿಕ ಶುಲ್ಕದ ಜೊತೆ ಇತರೆ ಶುಲ್ಕದ ಮಾಹಿತಿ ಸಿಗುತ್ತಿಲ್ಲ. ಡೊನೇಷನ್ ಹಾವಳಿ ತಡೆಗಟ್ಟಲು ಪೋಷಕರು, ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡು ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್ ಪ್ರಾಧಿಕಾರ ರಚಿಸಬೇಕು. ಶಿಕ್ಷಣವು ಸಂವಿಧಾನದ ಮೂಲಭೂತ ಹಕ್ಕಾಗಿದ್ದು, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಂಟಿ ಸಭೆ ಕರೆದು ಡೊನೇಷನ್ ಹಾವಳಿ ತಡೆಗಟ್ಟಬೇಕು’ ಎಂದು ಆಗ್ರಹಿಸಿದರು.

ದಲಿತ ವಿದ್ಯಾರ್ಥಿ ಪರಿಷತ್ತಿನ ಸಂಚಾಲಕ ಶಶಿಕುಮಾರ, ಸುರೇಶ, ಹನುಮಂತ, ನಾಗಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-32-1086752297

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.