ಲಿಂಗಸುಗೂರು: ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಡೊನೇಷನ್ ಹಾವಳಿ, ಹೆಚ್ಚುವರಿ ಶುಲ್ಕ ವಸೂಲಿ ಹಾಗೂ ಶಿಕ್ಷಣದ ವ್ಯಾಪಾರೀಕರಣ ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ತಾಲ್ಲೂಕು ಸಮಿತಿ ಪದಾಧಿಕಾರಿಗಳು ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಅನೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಪಾಲಕರಿಂದ ಡೊನೇಷನ್ ಹಾಗೂ ಹೆಚ್ಚುವರಿ ಶುಲ್ಕವನ್ನು ಮನಬಂದಂತೆ ವಸೂಲಿ ಮಾಡುತ್ತಿವೆ. ಇದರಿಂದ ಪಾಲಕರಿಗೆ ಶಿಕ್ಷಣ ಕೊಡಿಸುವುದೇ ಕಷ್ಟವಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಎಜುಕೇಶನ್ ರೆಗ್ಯುಲೆಟಿಂಗ್ ಪ್ರಾಧಿಕಾರ (ಡೇರಾ) ರಚಿಸಿ ಡೊನೇಷನ್ ಹಾವಳಿಗೆ ತಡೆಹಾಕಬೇಕು. ಅಕ್ರಮ ವಂತಿಗೆ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಖಾಸಗಿ ಶಾಲೆಗಳ ಶುಲ್ಕದ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು. ಅನಧಿಕೃತ ಟ್ಯೂಷನ್ ಸೆಂಟರ್ಗಳನ್ನು ಮುಚ್ಚಬೇಕು ಹಾಗೂ ಸರ್ಕಾರದ ನಿಯಮ ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ಮಾನ್ಯತೆ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

1983ರ ಶಿಕ್ಷಣ ಕಾಯ್ದೆ ಹಾಗೂ 2009ರ ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಉಲ್ಲಂಘನೆಯಾಗುತ್ತಿದ್ದು, ಕೆಲವು ಶಾಲೆಗಳು ಪ್ರವೇಶ ಪರೀಕ್ಷೆ ನಡೆಸುವುದು, ಶಾಲಾ ಬ್ಯಾಗ್, ನೋಟ್ಬುಕ್, ಯೂನಿಫಾರ್ಮ್ ಸೇರಿದಂತೆ ವಿವಿಧ ಸಾಮಗ್ರಿಗಳನ್ನು ಕಡ್ಡಾಯವಾಗಿ ಶಾಲೆಯಲ್ಲಿಯೇ ಖರೀದಿಸುವಂತೆ ಒತ್ತಾಯಿಸುವ ಮೂಲಕ ಶಿಕ್ಷಣವನ್ನು ವ್ಯಾಪಾರವನ್ನಾಗಿ ಮಾಡಿವೆ ಇದರ ವಿರುದ್ಧ ಕ್ರಮ ಜರಗಿಸುವಂತೆ ಆಗ್ರಹಿಸಿದರು.

ಎಸ್ಎಫ್ಐ ತಾಲ್ಲೂಕು ಸಮಿತಿ ಕಾರ್ಯದರ್ಶಿ ಚೆನ್ನಬಸವ ನಿಲೋಗಲ್, ರಮೇಶ ಜೆ, ಮೌನೇಶ ಕಡ್ಡೋಣ, ಮಹಿಬೂಬ್, ಮಹ್ಮದ್ ಅಲಿ ಇನ್ನಿತರಿದ್ದರು.

‘ಎಜುಕೇಶನ್ ರೆಗ್ಯುಲೆಟಿಂಗ್ ಪ್ರಾಧಿಕಾರ ರಚಿಸಿ’

ಜಾಲಹಳ್ಳಿ: ‘ರಾಯಚೂರು ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿತಡೆಯಲು ಜಿಲ್ಲಾ ಎಜುಕೇಶನ್ ರೆಗ್ಯುಲೆಟಿಂಗ್ ಪ್ರಾಧಿಕಾರವನ್ನು ತಕ್ಷಣ ರಚಿಸಬೇಕು’ ಎಂದು ಒತ್ತಾಯಿಸಿ ಗುರುವಾರ ಎಸ್ಎಫ್ಐ ಸಂಘಟನೆಯ ನೇತೃತ್ವದಲ್ಲಿ ಉಪ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರು.

ಸಂಘಟನೆಯ ತಾಲ್ಲೂಕು ಸಮಿತಿ ಮುಖಂಡ ಸಂತೋಷ ನಾಯಕ ಮಾತನಾಡಿ, ‘ಹಲವು ಖಾಸಗಿ ಶಾಲೆಗಳು ಹೆಚ್ಚಿನ ಪ್ರಮಾಣದಲ್ಲಿ ಡೊನೇಷನ್ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಸೂಲಿ ಮಾಡುತ್ತಾರೆ’ ಎಂದು ದೂರಿದರು.

ಆರ್ಟಿಇ ಕಾಯ್ದೆ ಸಮರ್ಪಕ ಜಾರಿಯಾಗದಿರುವುದು ಗಂಭೀರ ವಿಷಯ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಶಿಕ್ಷಣ ಪ್ರಾಧಿಕಾರ ಖಾಸಗಿ ಶಾಲೆಗಳ ಮೇಕೆ ನಿಯಂತ್ರಣ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿವೆ. ಡೊನೇಷನ್ ಪಿಡುಗಿನಿಂದ ಅನೇಕ ಮಕ್ಕಳು ಶಿಕ್ಷಣದಿಂದ ಚಂಚಿತರಾಗುತ್ತಿದ್ದಾರೆ ಎಂದರು

ಸಂಘಟನೆಯ ಮುಖಂಡ ಬಾಬು ಶ್ಯಾನೇರದೊಡ್ಡಿ ಮಾತನಾಡಿ, ‘ಅನಧಿಕೃತ ಟ್ಯೂಷನ್ ಸೆಂಟರ್ಗಳು ಹಾಗೂ ಜೆಇಇ, ನೀಟ್, ಸಿಇಟಿ ತರಬೇತಿ ಹೆಸರಿನಲ್ಲಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೂ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು .

ಈ ಸಂದರ್ಭದಲ್ಲಿ ಎಸ್ಎಫ್ಐ ತಾಲ್ಲೂಕು ಸಮಿತಿ ಅಧ್ಯಕ್ಷ ಮಹಾಲಿಂಗ ದೊಡ್ಡಮನಿ, ಗ್ರಾ.ಪಂ ಸದಸ್ಯ ಮಕ್ತೂಮ್ ಪಾರಶಿ, ಶಿವು ತಳವಾರ ಓಣಿ, ಅಭಿಷೇಕ, ರಿಯಾಜ್ ಆರ್ತಿ, ಬಸವರಾಜ ಲಿಂಗದಹಳ್ಳಿ, ನಿಂಗಯ್ಯ ಸುಣ್ಣದಕಲ್, ಹನುಮಂತ, ಯಲ್ಲಪ್ಪ , ಗೋಪಿ ಊಟಿ ಸೇರಿದಂತೆ ಅನೇಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-32-1786361359

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.