ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋರೆಯಾಲ್ ಇಂಡಿಯಾ ಫಾರ್ ಯಂಗ್ ವಿಮೆನ್ ಇನ್ ಸೈನ್ಸ್ ಸ್ಕಾಲರ್‌ಶಿಪ್ 2022

Last Updated 9 ಅಕ್ಟೋಬರ್ 2022, 21:30 IST
ಅಕ್ಷರ ಗಾತ್ರ

ಲೋರೆಯಾಲ್ ಇಂಡಿಯಾ ಫಾರ್ ಯಂಗ್ ವಿಮೆನ್ ಇನ್ ಸೈನ್ಸ್ ಸ್ಕಾಲರ್‌ಶಿಪ್ 2022

ಇದು ವಿಜ್ಞಾನದ ಕ್ಷೇತ್ರದಲ್ಲಿ ಪದವಿ ಮುಂದುವರಿಸಲು ಬಯಸುವ ಯುವತಿಯರಿಗೆ ಆರ್ಥಿಕ ನೆರವು ನೀಡುವುದಕ್ಕಾಗಿ ರೂಪಿಸಿರುವ ಸ್ಕಾಲರ್‌ಷಿಪ್‌ ಪ್ರೊಗ್ರಾಂ. ಈ ಮೂಲಕ ಯುವತಿಯರನ್ನು ಶೈಕ್ಷಣಿಕವಾಗಿ ಬಲವರ್ಧಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ.

ಅರ್ಹತೆ: 2021-22ರ ಶೈಕ್ಷಣಿಕ ವರ್ಷದಲ್ಲಿ ಪಿಯುಸಿಯಲ್ಲಿ(12ನೇ ತರಗತಿ) ಪಿಸಿಬಿ/ಪಿಸಿಎಂ/ಪಿಸಿಎಂಬಿಯಲ್ಲಿ ಶೇ 85 ಅಂಕದೊಂದಿಗೆ ಉತ್ತೀರ್ಣರಾದ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹ 6 ಲಕ್ಷಕ್ಕಿಂತ ಕಡಿಮೆಯಿರಬೇಕು.

ಆರ್ಥಿಕ ನೆರವು : ಆಯ್ದ ವಿದ್ಯಾರ್ಥಿನಿಯರಿಗೆ ವಿಜ್ಞಾನದಲ್ಲಿ ಪದವಿ ಪಡೆಯಲು ಅವರ ಬೋಧನಾ ಶುಲ್ಕ ಮತ್ತು ಶೈಕ್ಷಣಿಕ ವೆಚ್ಚಗಳಿಗಾಗಿ ಕಂತುಗಳಲ್ಲಿ ₹ 2,50,000 ವರೆಗೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 16-10-2022

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ

ಹೆಚ್ಚಿನ ಮಾಹಿತಿಗೆ: www.b4s.in/praja/LIS1

ಎರಿಕ್ಸನ್ ಎಂಪವರಿಂಗ್ ಗರ್ಲ್ ಸ್ಕಾಲರ್‌ಷಿಪ್ ಪ್ರೋಗ್ರಾಂ 2022

ವಿವರ: ಎರಡನೇ ವರ್ಷದ ಎಂಜಿನಿಯರಿಂಗ್ (ಐಟಿ/ಸಿಎಸ್) ಅಥವಾ ಎಂಬಿಎ ಪ್ರೋಗ್ರಾಂನಲ್ಲಿ ಓದುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಶೈಕ್ಷಣಿಕ ನೆರವು ನೀಡುವುದಕ್ಕಾಗಿ ರೂಪಿಸಿರುವ ಸ್ಕಾಲರ್‌ಷಿಪ್‌ ಪ್ರೋಗ್ರಾಂ ಇದು. ಹಿಂದುಳಿದ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿನಿಯರನ್ನು ಬೆಂಬಲಿಸುವ ಉದ್ದೇಶದೊಂದಿಗೆ ಈ ಕಾರ್ಯಕ್ರಮ ರೂಪಿಸಲಾಗಿದೆ.

ವಿವರ:ಎಂಜಿನಿಯರಿಂಗ್ (ಐಟಿ/ಸಿಎಸ್) ಅಥವಾ ಎಂಬಿಎ ಪದವಿಯ ಎರಡನೇ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಹಿಂದಿನ ವರ್ಷದ ಅಂತಿಮ ಪರೀಕ್ಷೆಯಲ್ಲಿ ಕನಿಷ್ಠ 6.5 ಜಿಪಿಎ ಅಥವಾ ತತ್ಸಮಾನ ಅಂಕಗಳನ್ನು ಗಳಿಸಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ₹ 6 ಲಕ್ಷ ಮೀರಿರಬಾರದು.

ಆರ್ಥಿಕ ಸಹಾಯ: ವರ್ಷಕ್ಕೆ ₹75,000

ಅರ್ಜಿ ಸಲ್ಲಿಸಲು ಕೊನೆಯ ದಿನ: 07-11-2022

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌ ಮೂಲಕ.

ಹೆಚ್ಚಿನ ಮಾಹಿತಿಗೆ:www.b4s.in/praja/EEGS13

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT