ಮಧುಗಿರಿ: ಎಲ್ಲೆಡೆ ಸ್ಪರ್ಧಾತ್ಮಕ ಸನ್ನಿವೇಶ ಸೃಷ್ಟಿಯಾಗಿರುವುದರಿಂದ ಜೀವನದಲ್ಲಿ ಯಶಸ್ವಿಯಾಗಲು ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ಈ ವಿಶಿಷ್ಟ ಶಕ್ತಿ ಗಳಿಸುವ ಕಡೆ ಎಲ್ಲರ ಚಿತ್ತವಿರಬೇಕು ಎಂದು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕ ಮಾಧವ ರೆಡ್ಡಿ ಅಭಿಪ್ರಾಯಪಟ್ಟರು.

ಪಟ್ಟಣದ ವೇಮನರೆಡ್ಡಿ ಸಮುದಾಯ ಭವನದಲ್ಲಿ ತಾಲ್ಲೂಕು ರೆಡ್ಡಿ ಜನ ಸಂಘದಿಂದ ನಡೆದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಮಾತನಾಡಿದರು.

ಉದ್ಯೋಗಕ್ಕಾಗಿ ಶಿಕ್ಷಣ ಬೇಕು. ಆದರೆ ಮೂಲ ಗುರಿ ಜ್ಞಾನದ ಶಿಖರ ಏರುವ ಕಡೆಯಿರಬೇಕು. ಶಿಕ್ಷಣವನ್ನು ಉದ್ಯೋಗ ಗಳಿಸುವುದಕ್ಕೆ ಸೀಮಿತವಾಗಿರಿಸಿಕೊಳ್ಳದೆ, ಉದ್ಯೋಗ ಸೃಷ್ಟಿ ಮಾಡುವ ಮಟ್ಟಕ್ಕೆ ಬೆಳೆಯಬೇಕು. ಸಾಮಾಜಿಕ ಆಸ್ತಿಯಾಗುವ ವ್ಯಕ್ತಿತ್ವ ಹೊಂದಬೇಕು ಎಂದು ಅಭಿಪ್ರಾಯಪಟ್ಟರು.

ತಾಲ್ಲೂಕು ರೆಡ್ಡಿ ಜನ ಸಂಘದ ಅಧ್ಯಕ್ಷ ಕೆ. ಎಸ್. ಪಾಂಡುರಂಗರೆಡ್ಡಿ ಮಾತನಾಡಿ, ಸಮುದಾಯದ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಂಘದ ಜವಾಬ್ದಾರಿ. ಈ ಕಾರ್ಯವನ್ನು ಎರಡು ವರ್ಷಗಳಿಂದ ಎಲ್ಲರ ಸಹಕಾರದೊಂದಿಗೆ ಕೈಗೊಳ್ಳಲಾಗುತ್ತಿದೆ. ಕಾರ್ಯಕ್ರಮದಲ್ಲಿ 2025-26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ 90ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಪಿ. ಸಿ. ಕೃಷ್ಣಾರೆಡ್ಡಿ, ಬಿಆರ್ ಸಿ ಪವನ್ ಕುಮಾರ್ ರೆಡ್ಡಿ, ಅಶ್ವಥ್ ನಾರಾಯಣರೆಡ್ಡಿ, ಮೋಹನ್ ಕುಮಾರ್ ರೆಡ್ಡಿ, ಶ್ರೀನಿವಾಸ್ ರೆಡ್ಡಿ, ವೆಂಕಟಕೃಷ್ಣಾರೆಡ್ಡಿ, ನಾರಾಯಣರೆಡ್ಡಿ, ಸುರೇಶ್ ರೆಡ್ಡಿ, ಚಿನ್ನಪ್ಪ ರೆಡ್ಡಿ, ಶನಿವಾರಂರೆಡ್ಡಿ, ಜಯರಾಮ್ ರೆಡ್ಡಿ, ತಿಮ್ಮಾರೆಡ್ಡಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-17-621555905

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.