ಮಧುಗಿರಿ: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಬಸವನಹಳ್ಳಿ ಸರ್ಕಾರಿ ಶಾಲೆ ಶಿಕ್ಷಕ ಎಸ್.ವಿ. ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಮೇ 1ರಂದು ಚುನಾವಣೆ ನಡೆದಿತ್ತು. ‘ಶಿಕ್ಷಕರ ಸ್ನೇಹ ಬಳಗ’ ಮತ್ತು ‘ಗುರುಮಿತ್ರ’ ಹೆಸರಿನಲ್ಲಿ ಸಿಂಡಿಕೇಟ್ ಮಾಡಿಕೊಂಡು ಸ್ಪರ್ಧಿಸಿದ್ದರು. ಸ್ನೇಹಬಳಗ ತಂಡವು ಸ್ಪಷ್ಟ ಬಹುಮತ ಗಳಿಸಿತ್ತು.

ಉಪಾಧ್ಯಕ್ಷ ರಾಗಿ ಎಚ್.ಡಿ. ನರಸೇಗೌಡ ಮತ್ತು ಲತಾಮಣಿ ಎಚ್.ಕೆ.ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಎಸ್. ಶಿವಕುಮಾರ್, ಸಹ ಕಾರ್ಯದರ್ಶಿಯಾಗಿ ಆರ್. ರಮೇಶ್ , ಬಿ. ಎಚ್. ಶಿಲ್ಪಾ, ಖಜಾಂಚಿಯಾಗಿ ಎಚ್.ಆರ್. ಶಶಿಕುಮಾರ್, ಸಂಘಟನಾ ಕಾರ್ಯದರ್ಶಿಯಾಗಿ ಡಿ.ಜಗದೀಶ್ ಮತ್ತು ಅಶ್ವಿನಿ ಆಯ್ಕೆಯಾಗಿದ್ದಾರೆ.

ಜಿಲ್ಲಾಧ್ಯಕ್ಷರಾಗಿ ಆರ್. ದೇವರಾಜು ಆಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಧುಗಿರಿ ಶೈಕ್ಷಣಿಕ ಜಿಲ್ಲಾ ಅಧ್ಯಕ್ಷರಾಗಿ ಶಿರಾ ಸರ್ಕಾರಿ ಉರ್ದು ಶಾಲೆ ಶಿಕ್ಷಕ ಆರ್.ದೇವರಾಜು ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣಯ್ಯನಪಾಳ್ಯ ಶಾಲೆಯ ಟಿ.ಡಿ. ನರಸಿಂಹಮೂರ್ತಿ, ಉಪಾಧ್ಯಕ್ಷರಾಗಿ ಪಿ. ಎಸ್. ನಾಗವೀಣಾ, ಕೆ. ಸಿ.ಅನಸೂಯ ಆಯ್ಕೆಯಾಗಿದ್ದು, ಸಹಕಾರ್ಯದರ್ಶಿಯಾಗಿ ಪಿ. ಜಿ. ಗಿರೀಶ್ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಎಂ.ಚಂದ್ರಯ್ಯ, ಸಂಘಟನಾ ಕಾರ್ಯದರ್ಶಿಯಾಗಿ ರೂಪ ಆಯ್ಕೆಯಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-17-1309760555

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.