ಮಡಿಕೇರಿ: ಸಾಮಾಜಿಕ ಮಾಧ್ಯಮಗಳಲ್ಲಿ ಬರುವ ಆರೋಗ್ಯ ಕುರಿತು ಮಾಹಿತಿ ಬಹಳಷ್ಟು ಸಂದರ್ಭಗಳಲ್ಲಿ ನಂಬಲು ಅರ್ಹವಾಗಿಲ್ಲ. ಹಾಗಾಗಿ, ಸೂಕ್ತ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಬೇಕು ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆಯ ವೈದ್ಯರಾದ ಡಾ.ಕೆ.ಟಿ.ರಾಜಶ್ರೀ ತಿಳಿಸಿದರು.

ಇಲ್ಲಿನ ರೋಟರಿ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಗುರುವಾರ ನಡೆದ ಆರೋಗ್ಯ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೋಟರಿ ಜಿಲ್ಲೆ 3181 ನ ಪಬ್ಲಿಕ್ ಇಮೇಜ್ ಸಮಿತಿ ಉಪಾಧ್ಯಕ್ಷ ಎಚ್.ಟಿ.ಅನಿಲ್ ಮಾತನಾಡಿ, ‘ರೋಟರಿ ಸಂಸ್ಥೆಯಿಂದ ಶ್ರವಣ ಸಮಸ್ಯೆ ಇರುವವರಿಗೆ ‘ದಿ ಗಿಫ್ಟ್ ಆಫ್ ಸೌಂಡ್’ ಎಂಬ ಯೋಜನೆ ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಶ್ರವಣ ಸಾಧನಗಳನ್ನು ದಾನಿಗಳ ಸಹಾಯದಿಂದ ನೀಡಲಾಗುತ್ತದೆ. ‘ಟಚ್ಚಿಂಗ್ ದಿ ಲಿಟಲ್ ಹಾರ್ಟ್ಸ್’ ಎಂಬ ಯೋಜನೆಯಡಿ ಅಗತ್ಯವುಳ್ಳ ಮಕ್ಕಳಿಗೆ ರೋಟರಿ ವತಿಯಿಂದ ಉಚಿತವಾಗಿ ಹೖದ್ರೋಗ ಶಸ್ತ್ರಚಿಕಿತ್ಸೆ ನೆರವೇರಿಸಲಾಗುತ್ತದೆ ಎಂದರು.

ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಮಾತನಾಡಿ, ‘ಪ್ರತೀ ವರ್ಷ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆರೋಗ್ಯ ಚಿಕಿತ್ಸಾ ಶಿಬಿರ ಆಯೋಜಿಸಲಾಗುತ್ತಿದ್ದು, ಈ ಬಾರಿಯೂ ಮಡಿಕೇರಿ, ರೋಟರಿ ವುಡ್ಸ್ ಮತ್ತು ಇನ್ನರ್ ವೀಲ್ ಸಂಸ್ಥೆಗಳ ಸದಸ್ಯರು ಮತ್ತು ಕುಟುಂಬ ವರ್ಗದವರಿಗೆ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ರೋಟರಿ ಮಿಸ್ಟಿ ಹಿಲ್ಸ್ ಕಾರ್ಯದಶಿ೯ ಬಿ.ಕೆ.ಕಾರ್ಯಪ್ಪ, ಮುಂದಿನ ಸಾಲಿನ ಅಧ್ಯಕ್ಷ ಪಿ.ಆರ್.ರಾಜೇಶ್, ಕಾರ್ಯದರ್ಶಿ ಡಾ.ಚೇತನ್ ಶೆಟ್ಟಿ, ಇನ್ನರ್ ವೀಲ್ ಸಂಸ್ಥೆಯ ಕಾರ್ಯದರ್ಶಿ ನಮಿತಾ ರೈ, ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್, ಕಾರ್ಯದರ್ಶಿ ಪ್ರಮೀಳಾ ಶೆಟ್ಟಿ, ತಜ್ಞ ವೈದ್ಯರಾದ ಡಾ.ಸಿ.ಆರ್.ಪ್ರಶಾಂತ್, ಡಾ.ರಾಜೇಶ್ವರಿ, ಡಾ.ಚಂದ್ರಶೇಖರ್, ಡಾ.ರಾಕೇಶ್, ಡಾ.ಕೆ.ಜಿ.ಶುಭಾ, ಎಸ್.ಎಂ.ಚೇತನ್, ಡಾ.ರಾಜಶ್ರೀ, ಡಾ.ನವೀನ್, ಡಾ.ಜಿಶ್ಮಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-51-2045254591

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.