ನಾಪೋಕ್ಲು: ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಗೌಡ ಮಹಿಳಾ ಒಕ್ಕೂಟ ಚೇರಂಬಾಣೆ ಸಹಯೋಗದಲ್ಲಿ ಮಂಗಳವಾರ ಕಾರುಗುಂದ ಗೌಡ ಸಮಾಜದಲ್ಲಿ 112ನೇ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಕಾರುಗುಂದ ಗೌಡ ಸಮಾಜದ ಅಧ್ಯಕ್ಷ ಕೊಡಪಾಲು ಗಣಪತಿ ಉದ್ಘಾಟಿಸಿದರು.

ಸಂಸ್ಥಾಪನ ದಿನದ ಕುರಿತು ಉಪನ್ಯಾಸ ನೀಡಿದ ನಿವೃತ್ತ ಪ್ರಾಂಶುಪಾಲರಾದ ಆನೇರ ಜಾನಕಿ ಮೋಹನ್, ಕರ್ನಾಟಕ ಮಾತ್ರವಲ್ಲದೆ ಹೊರರಾಜ್ಯ, ಹೊರದೇಶಗಳಲ್ಲೂ ಕನ್ನಡ ಸಂಘಗಳನ್ನ ಕಟ್ಟಿಕೊಂಡು ಕನ್ನಡದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಕನ್ನಡ ಭಾಷೆಯ ಹಿರಿಮೆಯನ್ನು ಎತ್ತಿ ಸಾರುತ್ತದೆ. ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಲವಾರು ಶ್ರೇಷ್ಠ ದತ್ತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ಅತ್ಯುನ್ನತ ನೃಪತುಂಗ ಪ್ರಶಸ್ತಿಯನ್ನು ಕೊಡುತ್ತಿರುವುದು ಕನ್ನಡ ಸಾಹಿತ್ಯ ಪರಿಷತ್ತಿನ ಮತ್ತೊಂದು ಹಿರಿಮೆ ಎಂದರು.

ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ಕಾರುಗುಂದ ಗೌಡ ಯುವ ವೇದಿಕೆಯ ಅಧ್ಯಕ್ಷ ಪ್ರದೀಪ್ ಪಾರೆಮಜಲು ಬೈಮನ ಜ್ಯೋತಿ ತಿಮ್ಮಯ್ಯ, ಪರಿಷತ್ತಿನ ಪದಾಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-51-100058967

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.