ಮಡಿಕೇರಿ: ‘ಶುಶ್ರೂಷಕ ಹುದ್ದೆ ಕೇವಲ ವೃತ್ತಿಯಲ್ಲ. ಅದು ಸೇವೆ ಮಾಡುವ ಪವಿತ್ರ ಕೆಲಸ. ಹಾಗಾಗಿ, ಪದವಿ ಸ್ವೀಕರಿಸಿದ ವಿದ್ಯಾರ್ಥಿಗಳು ಮುಂದೆ ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯ ಅಳವಡಿಸಿಕೊಂಡು ಸೇವಾ ಮನೋಭಾವದಿಂದ ಕೆಲಸ ಮಾಡಬೇಕು’ ಎಂದು ವೈದ್ಯಕೀಯ ನಿರ್ದೇಶನಾಲಯದ ನರ್ಸಿಂಗ್ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಶ್ರೀಕಾಂತ್ ಫುಲಾರಿ ತಿಳಿಸಿದರು.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಭಾನುವಾರ ನಡೆದ ಸರ್ಕಾರಿ ಶುಶ್ರೂಷಾ ಕಾಲೇಜಿನ 2ನೇ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ನರ್ಸಿಂಗ್ ಶಿಕ್ಷಣದಿಂದ ಲಭಿಸುವ ಉದ್ಯೋಗಗಳು ಸಮಾಜದಲ್ಲಿ ಅತ್ಯಂತ ಗೌರವಾನ್ವಿತವಾಗಿವೆ ಹಾಗೂ ಸೇವಾಭಾವನೆಯ ಪ್ರತಿರೂಪವಾಗಿವೆ. ಉತ್ತಮ ನೈಪುಣ್ಯ ಮತ್ತು ಕಾಳಜಿಯ ಮನೋಭಾವದಿಂದ ರೋಗಿಗಳ ಆರೋಗ್ಯದಲ್ಲಿ ಮಹತ್ತರ ಬದಲಾವಣೆ ತರಬಹುದು. ಈಗ ಶುಶ್ರೂಷಕ ಹುದ್ದೆಗಳಿಗೆ ದೇಶ, ವಿದೇಶಗಳಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂದು ತಿಳಿಸಿದರು.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ.ಎ.ಜೆ.ಲೋಕೇಶ್ ಮಾತನಾಡಿ, ‘ನರ್ಸಿಂಗ್ ವೃತ್ತಿ ಕೇವಲ ಉದ್ಯೋಗವಲ್ಲ. ಅದು ಸೇವಾ ಧರ್ಮವಾಗಿದ್ದು, ಮಾನವೀಯ ಮೌಲ್ಯಗಳನ್ನು ಉಳಿಸಿಕೊಂಡು ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು‘ ಎಂದು ಕಿವಿಮಾತು ಹೇಳಿದರು.

‘ಇದೊಂದು ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ತಿರುವು ಆಗಿದ್ದು, ಮುಂದೆ ಉತ್ತಮ ವೈದ್ಯಕೀಯ ಸೇವೆಯನ್ನು ಸಮಾಜಕ್ಕೆ ಸಲ್ಲಿಸುವ ಜವಾಬ್ದಾರಿಯೂ ನಿಮ್ಮ ಮೇಲೆ ಇದೆ’ ಎಂದು ಹೇಳಿದರು.

ಸರ್ಕಾರಿ ಶುಶ್ರೂಷಾ ಕಾಲೇಜಿನ ಪ್ರಾಂಶುಪಾಲರಾದ ಎ.ಕೆ.ಮಂಜುಳಾ ಅವರು, ಕಳೆದ 4 ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳನ್ನು ಕುರಿತು ಮಾತನಾಡಿದರು.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆಯ ಸ್ಥಾನೀಯ ವೈದ್ಯಾಧಿಕಾರಿ ಡಾ. ಅಭಿನಂದನ್ ಬಿ ವಂದಕುದರಿ ಮಾತನಾಡಿ, ಇದು ಕೇವಲ ವಿದ್ಯಾರ್ಥಿಗಳ ಸಂಭ್ರಮವಷ್ಟೇ ಅಲ್ಲ, ನಮ್ಮ ಸಂಸ್ಥೆಯ ಹೆಮ್ಮೆಯ ಪ್ರತೀಕವಾಗಿದೆ. ಆತ್ಮವಿಶ್ವಾಸವನ್ನು ಹೆಚ್ಚಿಸಿ, ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸು ಸಾಧಿಸಲು ಪ್ರೇರಣೆ ನೀಡುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ತುರ್ತು ವೈದ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಮೋಹನ್ ಅಪ್ಪಾಜಿ ಮಾತನಾಡಿ, ‘ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಸ್ವೀಕರಿಸಿದ ನಿಮಗೆ ಮುಂದಿನ ಭವಿಷ್ಯ ಉಜ್ವಲವಾಗಿರಲಿ’ ಎಂದು ಹೇಳಿದರು.

ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಕೆ.ಎಂ.ರೋಹಿಣಿ, ಸರ್ಕಾರಿ ಶುಶ್ರೂಷಾ ಕಾಲೇಜಿನ ಪ್ರಾಧ್ಯಾಪಕ ಸಿ.ಎಂ.ದೀಪರಾಜ್, ಸಹ ಪ್ರಾಧ್ಯಾಪಕ ಮಾರ್ಟಿನ್ ಲೂಥರ್ ಕಿಂಗ್, ಸಹಾಯಕ ಪ್ರಾಧ್ಯಾಪಕಿ ಎಸ್.ಎನ್.ರಂಜಿನಿ, ಉಪನ್ಯಾಸಕರಾದ ಕೆ.ಎನ್.ಅಶ್ವಿನಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯ ನರ್ಸಿಂಗ್ ಮೇಲ್ವಿಚಾರಕ ಮಹೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-51-239069935

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.