ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಇಂಗ್ಲಿಷ್ ವಿಭಾಗ ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಎರಡು ದಿನಗಳ ಕೌಶಲ ತರಬೇತಿ ಕಾರ್ಯಾಗಾರಕ್ಕೆ ಶುಕ್ರವಾರ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ನಿವೃತ್ತ ಡಿನ್ ಪ್ರೊ.ಜೋಸ್ಲಿ ಟಿ ಲೋಬೊ ಅವರು ವಿದ್ಯಾರ್ಥಿಗಳಿಗೆ ಬಿಯಾಂಡ್ ಬುಕ್ಸ್, ಸ್ಕಿಲ್ ಫೊರ್ ದಿ ರಿಯಲ್ ವರ್ಡ್ ವಿಷಯದ ಕುರಿತು ಕಾರ್ಯಾಗಾರ ನಡೆಸಿಕೊಟ್ಟರು.

‘ಕಾರ್ಯಾಗಾರವನ್ನು ವಿದ್ಯಾರ್ಥಿಗಳ ಕೌಶಲ ಹೆಚ್ಚಿಸಲು ಸಹಕಾರಿಯಾಗುವ ನಿಟ್ಟಿನಲ್ಲಿ ಆಯೋಜಿಸಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗಪಡಿಸಿಕೊಳ್ಳಿ’ ಎಂದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ‘ಸದ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಕೌಶಲ ತರಬೇತಿ ಕಾರ್ಯಗಳು ಬಹಳ ಅವಶ್ಯಕವಾಗಿದೆ. ಕಾಲೇಜಿನಲ್ಲಿ ಇಂಗ್ಲೀಷ್ ವಿಭಾಗದಿಂದ ಕೌಶಲಯ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದ್ದು, ಇದು ವಿದ್ಯಾರ್ಥಿಗಳಿಗೆ ಬಹಳ ಪ್ರಯೋಜನಕಾರಿಯಾಗಿದೆ. ಇದರ ಪ್ರಯೋಜನವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು’ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೋ.ತಿಪ್ಪೆಸ್ವಾಮಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ನಯನಾ ಕಶ್ಯಪ್, ಉಪನ್ಯಾಸಕ ಪೂಣಚ್ಚ, ಹಳೆ ವಿದ್ಯಾರ್ಥಿ ಸಂಘದ ನಿರ್ದೇಶಕ ಚೀಯಕಪೂವಂಡ ಸಚಿನ್ ಪೂವಯ್ಯ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-51-1299822128

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.