ಮಧುಗಿರಿ: ಅಂಬೇಡ್ಕರ್ ಜನರಲ್ಲಿನ ಮೌಢ್ಯ, ಅಜ್ಞಾನ ನೀಗಿಸಿದರೆ, ಬಾಬೂಜಿ ಜನರ ಹಸಿವು ನೀಗಿಸಿದರು ಎಂದು ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಹೇಳಿದರು.

ಪಟ್ಟಣದ ಕನ್ನಡ ಭವನದಲ್ಲಿ ತಾಲ್ಲೂಕು ಆಡಳಿತ ಹಾಗೂ ದಲಿತ ಸಂಘಟನೆಗಳಿಂದ ನಡೆದ ಅಂಬೇಡ್ಕರ್ ಹಾಗೂ ಬಾಬೂಜಿ ಜಯಂತಿಯಲ್ಲಿ ಮಾತನಾಡಿದರು.

ಅಂಬೇಡ್ಕರ್ ಹಾಗೂ ಬಾಬೂಜಿ ಅವರ ಆರ್ಥಿಕ ಜ್ಞಾನವನ್ನು ಎಲ್ಲರೂ ಅರಿಯಬೇಕಿದೆ ಎಂದರು.

ಐ.ಡಿ. ಹಳ್ಳಿ ನರಸಿಂಹಮೂರ್ತಿ ಮಾತನಾಡಿ, ದೇಶದ ಮಹಾನ್ ದಾರ್ಶನಿಕರ ಜೀವನ ಚರಿತ್ರೆಗಳನ್ನು ಓದುವ ಮೂಲಕ ಜ್ಞಾನಿಗಳಾಗಬಹುದೇ ಹೊರತು ಪುರಾಣಗಳಿಂದಲ್ಲ ಎಂದರು.

ಉಪನ್ಯಾಸಕ ರಂಗಧಾಮಯ್ಯ ಮಾತನಾಡಿ, ಮಹಿಳೆಯರಿಗೆ ಮತದಾನದ ಹಕ್ಕು, ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಪ್ರತಿಯೊಬ್ಬರಿಗೂ ರಾಜಕೀಯ ಸ್ಥಾನಮಾನ ಪಡೆಯುವಂತಹ ಸಂವಿಧಾನ ನೀಡಿದವರು ಅಂಬೇಡ್ಕರ್ ಎಂದರು.

ತಹಶೀಲ್ದಾರ್ ಶ್ರೀನಿವಾಸ್ ಮಾತನಾಡಿ, ಅಂಬೇಡ್ಕರ್ ಅವರನ್ನು ಆರಾಧಿಸುವ ಬದಲು ಅವರ ಆಶಯಗಳನ್ನು ಅರಿಯಬೇಕು ಎಂದು ಹೇಳಿದರು.

ಡಿಡಿಪಿಐ ಮಾಧವರೆಡ್ಡಿ, ಬಿಇಒ ಹನುಮಂತರಾಯಪ್ಪ, ತಾಲ್ಲೂಕು ಮಾದಾರ ಮಹಾಸಭಾ ಅಧ್ಯಕ್ಷ ಗೋಪಾಲಯ್ಯ, ನೌಕರರ ಸಂಘದ ಜಿಲ್ಲಾಧ್ಯಕ್ಷ ರಂಗಪ್ಪ, ಜೀವಿಕಾ ಮಂಜುನಾಥ್, ತೊಂಡೋಟಿ ರಾಮಾಂಜಿ, ಎಸ್.ಕೆ. ರಂಗನಾಥ್, ಮ.ಹ.ರಾಜು, ದಾಸಪ್ಪ, ಅರುಣ್, ನಿವೇದಿತಾ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-17-1637094961

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.