ಮಧುಗಿರಿ: ತಿಗಳ ಸಮುದಾಯವು ಶ್ರಮ ಸಂಸ್ಕೃತಿಯ ರೂಪಕವಾಗಿದ್ದು, ಮಾದರಿ ಕೃಷಿ ಕೈಗೊಂಡು ಸ್ವಾವಲಂಬಿಗಳಾಗಿದ್ದಾರೆ. ಬೆಂಗಳೂರು ಕರಗ ವಿಶ್ವ ಪ್ರಸಿದ್ಧಿಯಾಗಲು ಇವರ ಕೊಡುಗೆ ಅಪಾರ ಎಂದು ಶಾಸಕ ಕೆ.ಎನ್ ರಾಜಣ್ಣ ಹೇಳಿದರು.

ತಾಲ್ಲೂಕು ಆಡಳಿತ ಹಾಗೂ ತಿಗಳರ ಸಂಘದಿಂದ ಪಟ್ಟಣದ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಅಗ್ನಿಬನ್ನಿರಾಯ ಜಯಂತಿಯಲ್ಲಿ ಮಾತನಾಡಿದರು.

ತಿಗಳ ಸಮುದಾಯದೊಂದಿಗೆ ಬಾಲ್ಯದಿಂದ ಇರುವ ತಮ್ಮ ಬಾಂಧವ್ಯ ಸ್ಮರಿಸಿಕೊಂಡ ಅವರು ಸಮುದಾಯದ ವಿದ್ಯಾರ್ಥಿ ನಿಲಯಕ್ಕೆ ಈಗಾಗಲೇ ಜಾಗ ಒದಗಿಸಿದ್ದು, ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಲಾಗುವುದು ಎಂದರು.

ಸರ್ವಜ್ಞ ವೇದಿಕೆ ಅಧ್ಯಕ್ಷ ವೆಂಕಟರಮಣಪ್ಪ ಮಾತನಾಡಿ, ಹಲವು ಜಿಲ್ಲೆಗಳಲ್ಲಿ ನೆಲೆಸಿರುವ ತಿಗಳ ಜನಾಂಗವು ತೋಟಗಾರಿಕೆ, ಪುಷ್ಪ ಕೃಷಿಯಲ್ಲಿ ಸೈ ಎನಿಸಿಕೊಂಡಿದ್ದಾರೆ. ಈ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದ್ದು, ಸಮುದಾಯದ ಏಳ್ಗೆಗೆ ಸರ್ಕಾರದ ನೆರವು ಅಗತ್ಯವಾಗಿದೆ ಎಂದರು.

ಗೋವಿಂದಪ್ಪ, ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್ ಶ್ರೀನಿವಾಸ್, ತಿಗಳರ ಸಂಘದ ತಾಲ್ಲೂಕು ಅಧ್ಯಕ್ಷ ಚಿಕ್ಕ ಹನುಮಯ್ಯ, ಕಾರ್ಯದರ್ಶಿ ರಾಮಕೃಷ್ಣಪ್ಪ, ಎಂ.ಜಿ ಶ್ರೀನಿವಾಸಮೂರ್ತಿ, ಪಾಪಣ್ಣ ಹೇಮಂತ್, ಸುರೇಶ್, ನವೀನ್, ಭಾನುಪ್ರಕಾಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-17-882681832

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.