ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯುಸಿ: ಸೊಲೆನಾಯ್ಡ್‌ನಲ್ಲಿ ವಿದ್ಯುತ್ ಪ್ರವಾಹದಿಂದ ಉಂಟಾದ ಕಾಂತಕ್ಷೇತ್ರ

Last Updated 21 ಫೆಬ್ರುವರಿ 2021, 19:30 IST
ಅಕ್ಷರ ಗಾತ್ರ

ಅವಾಹಕ ಹೊದಿಕೆ ಇರುವ ತಾಮ್ರದ ತಂತಿಯ ಅನೇಕ ಸುರುಳಿಗಳನ್ನು ಒತ್ತೊತ್ತಾಗಿ ಸುತ್ತಿರುವ ಸಿಲಿಂಡರ್ ಆಕಾರವನ್ನು ಸೊಲೆನಾಯ್ಡ್ ಎನ್ನುವರು.

ಸೊಲೆನಾಯ್ಡ್ ಸುತ್ತಲೂ ಉಂಟಾಗುವ ಕಾಂತೀಯ ಬಲರೇಖೆಗಳು ದಂಡಕಾಂತದ ಸುತ್ತಲೂ ಉಂಟಾದ ಕಾಂತಕ್ಷೇತ್ರದಂತೆ ಇದ್ದು, ಇದು ಉತ್ತರ ಮತ್ತು ದಕ್ಷಿಣ ಧ್ರುವಗಳನ್ನು ಹೊಂದಿದೆ. ಸೊಲೆನಾಯ್ಡ್‌ನ ಒಳಭಾಗದಲ್ಲಿ ಕಾಂತೀಯ ಬಲರೇಖೆಗಳು ಪರಸ್ಪರ ಸಮಾನಾಂತರ ಸರಳ ರೇಖೆಗಳಂತಿದ್ದು, ಕಾಂತಕ್ಷೇತ್ರವು ಒಳಭಾಗದಲ್ಲಿ ಏಕರೂಪದಲ್ಲಿರುತ್ತದೆ.

ಹೆಚ್ಚು ಕಾಂತಕ್ಷೇತ್ರ ಹೊಂದಿರುವ ಸೊಲೆನಾಯ್ಡ್‌ನ ಒಳಭಾಗದಲ್ಲಿ ಕಾಂತಿಯ ವಸ್ತುವಾದ ಕಬ್ಬಿಣವನ್ನು ಇರಿಸಿದಾಗ ಅದು ಕಾಂತದಂತೆ ವರ್ತಿಸುತ್ತದೆ. ಈ ಪರಿಣಾಮವನ್ನು ‘ವಿದ್ಯುತ್ಕಾಂತೀಯ’ ಪರಿಣಾಮವೆಂದೂ ಉಂಟಾದ ಕಾಂತವನ್ನು ‘ವಿದ್ಯುತ್ಕಾಂತ’ ಎಂದೂ ಕರೆಯುತ್ತಾರೆ.

ಕಾಂತಕ್ಷೇತ್ರದಲ್ಲಿನ ವಿದ್ಯುತ್ ಪ್ರವಾಹವಿರುವ ವಾಹಕದ ಮೇಲಿನ ಬಲ

ಆಂಡ್ರೆ ಮೇರಿ ಆಂಪಿಯರ್ ಅವರು ಕಾಂತವು ವಿದ್ಯುತ್ ಪ್ರವಾಹವಿರುವ ವಾಹಕದ ಮೇಲೆ ಸಮ ಮತ್ತು ವಿರುದ್ಧವಾದ ಬಲವನ್ನು ಪ್ರಯೋಗಿಸುತ್ತದೆ ಎಂದು ಸೂಚಿಸಿದರು.

ವಾಹಕದ ಮೇಲೆ ವರ್ತಿಸುವ ಬಲವು ವಿದ್ಯುತ್ ಪ್ರವಾಹದ ದಿಕ್ಕು ಮತ್ತು ಕಾಂತಕ್ಷೇತ್ರದ ದಿಕ್ಕನ್ನು ಅವಲಂಬಿಸಿದ್ದು, ವಿದ್ಯುತ್ ಪ್ರವಾಹದ ದಿಕ್ಕು ಕಾಂತಕ್ಷೇತ್ರದ ದಿಕ್ಕನ್ನು ಅವಲಂಬಿಸಿದ್ದು, ವಿದ್ಯುತ್ ಪ್ರವಾಹದ ದಿಕ್ಕು ಕಾಂತಕ್ಷೇತ್ರದ ದಿಕ್ಕಿಗೆ ಲಂಬವಾಗಿದ್ದಾಗ ಬಲದ ಪರಿಣಾಮವು ಅಧಿಕವಾಗಿರುತ್ತದೆ.

ಕಾಂತಕ್ಷೇತ್ರದ ದಿಕ್ಕು ವಿದ್ಯುತ್ ಪ್ರವಾಹದ ದಿಕ್ಕಿಗೆ ಲಂಬವಾಗಿರುವುದಲ್ಲದೆ, ಉಂಟಾದ ಬಲವು ಇವೆರಡಕ್ಕೂ ಲಂಬವಾಗಿರುತ್ತದೆ.

ಫ್ಲೆಮಿಂಗ್‌ನ ಎಡಗೈ ನಿಯಮ

ಎಡಗೈ ಹೆಬ್ಬೆರಳುಗಳು, ತೋರು ಬೆರಳು ಮತ್ತು ಮಧ್ಯದ ಬೆರಳುಗಳನ್ನು ಪರಸ್ಪರ ಲಂಬವಾಗಿರುವಂತೆ ಹಿಡಿದುಕೊಂಡಾಗ ತೋರು ಬೆರಳು ಕಾಂತಕ್ಷೇತ್ರದ ದಿಕ್ಕನ್ನೂ, ಮಧ್ಯದ ಬೆರಳು ವಿದ್ಯುತ್ ಪ್ರವಾಹದ ದಿಕ್ಕನ್ನೂ ಹಾಗೂ ಹೆಬ್ಬೆರಳು ವಾಹಕದ ಮೇಲೆ ವರ್ತಿಸುವ ಬಲದ ದಿಕ್ಕನ್ನೂ ಸೂಚಿಸುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT