ಮಳವಳ್ಳಿ: ‘ಮನುಷ್ಯನ ಮಾನಸಿಕ ಮತ್ತು ಶಾರೀರಿಕ ಬೆಳವಣಿಗೆಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಚುಟುವಟಿಕೆಗಳು ಸಹಕಾರಿ’ ಎಂದು ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ.ರವೀಂದ್ರ ಕುಮಾರ್ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ಸ್ಕೌಟ್ಸ್ ಮತ್ತು ಗೈಡ್ಸ್, ರೆಡ್ ಕ್ರಾಸ್ ಹಾಗೂ ಇತರೆ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

'ವಿದ್ಯಾರ್ಥಿಗಳು ವ್ಯಾಸಂಗ ಅವಧಿಯಲ್ಲಿ ಪಠ್ಯ ಚಟುವಟಿಕೆಗಳ ಜೊತೆ ಸಹಪಠ್ಯ ಚಟುವಟಿಕೆಗಳಾದ ಕ್ರೀಡೆ ಇನ್ನಿತರ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಕಾಲೇಜಿಗೆ ಒಳ್ಳೆ ಹೆಸರನ್ನು ತರಬೇಕು. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ದೂರದೃಷ್ಟಿ ಪರಿಣಾಮ ಕಾಲೇಜಿನಲ್ಲಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿಯೇ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದರು.

ಉಪನ್ಯಾಸಕ ಎಂ.ಜಿ.ಅಪ್ಪಣ್ಣ, ಪ್ರಾಂಶುಪಾಲೆ ಡಿ.ಯಶೋಧಾ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಬಬ್ರುವಾಹನ, ಅಧೀಕ್ಷಕ ನಂದೀಶ್, ದುಗ್ಗನಹಳ್ಳಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಶಿವಕುಮಾರ, ಮುಖ್ಯೋಪಾಧ್ಯಾಯ ಎಚ್.ಎಸ್.ಶಿವಪ್ರಸಾದ್, ಕ್ರೀಡಾ ಹಾಗೂ ಸಾಂಸ್ಕೃತಿಕ ಸಮಿತಿ ಸಂಚಾಲಕ ಪ್ರೊ.ಕೆ.ಎಲ್.ಮಲ್ಲೇಶ್, ಬಿ.ನಾಗೇಶ, ಸಿ.ಕುಮಾರ, ಪ್ರೊ.ಅನಿಲ್ ಕುಮಾರ್, ಪ್ರೊ.ಹೆಚ್.ಅನೂಪ್, ಎಂ.ವಿ.ರಘು, ಸಿದ್ದಾರ್ಥ್, ಮನು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-40-1659572859

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.